Site icon Kundapra.com ಕುಂದಾಪ್ರ ಡಾಟ್ ಕಾಂ

ಕಾರವಾರ – ಬೆಂಗಳೂರು ರೈಲು ಇನ್ನು ಮುಂದೆ ‘ಪಂಚಗಂಗಾ ಎಕ್ಸ್‌ಪ್ರೆಸ್’

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕಾರವಾರ-ಬೆಂಗಳೂರು ವಯಾ ಪಡೀಲ್ ಬೈಪಾಸ್ ಸೂಪರ್ ಫಾಸ್ಟ್ ರೈಲಿಗೆ ‘ಪಂಚ ಗಂಗಾ ಎಕ್ಸ್‌ಪ್ರೆಸ್’ ಎಂಬ ಹೆಸರನ್ನು ಕೆಂದ್ರ ರೈಲ್ವೆ ಸಚಿವಾಲಯ ಮರುನಾಮಕರಣ ಮಾಡಿ ಆದೇಶಿಸಿದೆ.

ಉಡುಪಿ ಜಿಲ್ಲೆಯ ಐದು ಪ್ರಮುಖ ಪುಣ್ಯ ನದಿಗಳು ಸಂಗಮಿಸಿ ಸೃಷ್ಟಿಯಾಗುವ ಪ್ರಾಕೃತಿಕ ಅಚ್ಚರಿ ಪಂಚಗಂಗಾವಳಿ ನದಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಗಂಗಾವಳಿ ನದಿಯ ಹೆಸರು ಸೇರಿಸಿ ಜನರ ಅಪೇಕ್ಷೆಯಂತೆ ಪಂಚಗಂಗಾ ಎಕ್ಸ್‌ಪ್ರೆಸ್  ಎಂದು ನಾಮಕರಣ ಮಾಡಲಾಗಿದೆ.

ಈ ಹೆಸರನ್ನು ಬೆಂಗಳೂರು ಕಾರವಾರ (16595/16596) ರೈಲಿಗೆ ಪಂಚಗಂಗಾ ಹೆಸರು ಇಡುವಂತೆ ಕುಂದಾಪುರ ರೈಲ್ವೆ ಪ್ರಯಾಣಿಕರ ಹಿತರಕ್ಷಣಾ ಸಮಿತಿ ಹಾಗೂ ಸಾರ್ವಜನಿಕರು ಸಂಸದರಿಗೆ ಮನವಿ ಮಾಡಿದ್ದು ಅದರಂತೆ ಸಂಸದೆ ಶೋಭಾ ಕರಂದ್ಲಾಜೆ ಅವರು ಹಿಂದಿನ ರೈಲ್ವೆ ರಾಜ್ಯ ಸಚಿವರಾದ ಸುರೇಶ್ ಅಂಗಡಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು.  ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ,ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ ಈ ಬಗ್ಗೆ ಕೇಂದ್ರ ಸರಕಾರಕ್ಕೆ ಒತ್ತಾಯಿಸಿದ್ದರು.

Exit mobile version