Kundapra.com ಕುಂದಾಪ್ರ ಡಾಟ್ ಕಾಂ

ತಾವರೆಕೆರೆ ಹೆದ್ದಾರಿ ಅಪಘಾತ: ಚಿಕಿತ್ಸೆ ಫಲಿಸದೇ ಛಾಯಾಗ್ರಾಹಕ ಅಶೋಕ್ ಶೆಟ್ಟಿ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತುಮಕೂರಿನ ತಾವರೆಕೆರೆ ಹೆದ್ದಾರಿಯಲ್ಲಿ ನಡೆದ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ನಾವುಂದದ ಮಾನಸ ಸ್ಟೂಡಿಯೋ ಮಾಲೀಕ ಹೇರೂರು ಅಶೋಕ್ ಶೆಟ್ಟಿ (58) ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಬೆಳಿಗ್ಗೆ ಕೊನೆಯುಸಿರೆಳಿದಿದ್ದಾರೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡ ಅಶೋಕ್ ಶೆಟ್ಟಿಯವರನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಭಾಗಕ್ಕೆ ಬಲವಾದ ಪೆಟ್ಟು ತಗುಲಿದ್ದರಿಂದ ಆಸ್ಪತ್ರೆಯಲ್ಲಿ ಸಾವು ಬದುಕಿನ ಹೋರಾಟ ನಡೆಸಿ ಕೊನೆಗೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಅವರ ಪುತ್ರ ಪನ್ನಗ ಶೆಟ್ಟಿಯವರನ್ನು ಸೋಮವಾರವೇ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದ, ಚಿಕಿತ್ಸೆ ನೀಡಲಾಗುತ್ತಿದೆ.

ಅಶೋಕ್ ಕುಮಾರ್ ಶೆಟ್ಟಿಯವರು ಕುಂದಾಪುರ ತಾಲೂಕು ಛಾಯಾಗ್ರಾಹಕ ಸಂಘ ಹಾಗೂ ರಾಜ್ಯ ಛಾಯಾಗ್ರಾಹಕ‌ ಸಂಘದ ಅಧ್ಯಕ್ಷರಾಗಿ‌ ಸೇವೆ ಸಲ್ಲಿಸಿದ್ದು, ಪ್ರಸ್ತುತ ಜಿಲ್ಲಾ‌ ಛಾಯಾಗ್ರಾಹಕ‌ ಸಂಘದ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ಹಿಂದಿನ ಅವಧಿಯಲ್ಲಿ ಹೆರೂರು ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಅವರು ಒಂದು ಅವಧಿಗೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.  ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಇದನ್ನೂ ಓದಿ:
► ಕಂಟೈನರ್‌ಗೆ ಡಿಕ್ಕಿಯಾದ ಕಾರು: ಛಾಯಾಗ್ರಾಹಕ ಹಾಗೂ ಅವರ ಪುತ್ರನಿಗೆ ಗಂಭೀರ ಗಾಯ – https://kundapraa.com/?p=49740 .

Exit mobile version