ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ) ಯಡಿ ಸ್ವ-ಉದ್ಯೋಗ ಆರಂಭಿಸಲು ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿಯಲ್ಲಿ ಗರಿಷ್ಟ ಯೋಜನಾ ವೆಚ್ಚ 25 ಲಕ್ಷ ರೂ. ಉತ್ಪಾದನೆ ಚಟುವಟಿಕೆ ಮತ್ತು 10 ಲಕ್ಷ ರೂ. ಆಯ್ದ ಸೇವಾ ಘಟಕಕ್ಕೆ ಬ್ಯಾಂಕ್ ಸಾಲದೊಂದಿಗೆ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಕೆಲವು ಸೇವಾ ಘಟಕ ಸ್ಥಾಪಿಸುವವರಿಗೆ ಅವಕಾಶವಿದ್ದು, ಯೋಜನಾ ವೆಚ್ಚದ ಮೇಲೆ ಶೇ. 25 ರಿಂದ 35 ರ ವರೆಗೆ ಸಹಾಯಧನ ನೀಡಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ https://www.kviconline.gov.in/pmegpeportal/jsp/pmegponline.jsp ಅಥವಾ ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ (ಕೆ.ವಿ.ಐ.ಬಿ), 2ನೇ ಮಹಡಿ, ಜಿಲ್ಲಾ ಆಡಳಿತ ಕಚೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574855 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.