Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಸರಸ್ವತಿ ವಿದ್ಯಾಲಯಲಕ್ಕೆ ಉಡುಪಿ ಡಿಡಿಪಿಐ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಡುಪಿ ಜಿಲ್ಲಾ ಉಪನಿರ್ದೇಶಕ ಎಂ. ಎಚ್. ನಾಗೂರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜು.19ರಂದು ಪ್ರಾರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮಾಡಿಕೊಳ್ಳಬೇಕಿರುವ ಸಿದ್ಧತೆ, ಮುಂಜಾಗ್ರತಾ ಕ್ರಮಗಳ ಬಗ್ಗೆ ಕೇಂದ್ರದ ಅಧಿಕಾರಿಗಳಿಗೆ ಮಾಹಿತಿ ನೀಡಿ ಶಾಲೆಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಕೋವಿಡ್-19 ಹಿನ್ನಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಇಲಾಖೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದ ಅವರು, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಮಾನಸಿಕ ಸ್ಥೈರ್ಯ ತುಂಬುವ ಕೆಲಸ ನಡೆಸಬೇಕು. ವಿದ್ಯಾರ್ಥಿಗಳು ಯಾವುದೇ ಹೆದರಿಕೆ ಇಲ್ಲದೆ ಪರೀಕ್ಷಾ ಕೇಂದ್ರಗಳಿಗೆ ಬಂದು ಪರೀಕ್ಷೆಯನ್ನು ಬರೆಯುವ ನಿಟ್ಟಿನಲ್ಲಿ ಅಧ್ಯಾಪಕರು ಶ್ರಮಿಸಬೇಕು ಎಂದರು.
ಇದೇ ಸಂದರ್ಭ ಚಂದನ ವಾಹಿನಿ ಮೂಲಕ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮಾಹಿತಿ ಮಾರ್ಗದರ್ಶನ ನೀಡಿದರು ಹಾಗೂ ಪರೀಕ್ಷೆಯ ಒಎಂಆರ್ ಶೀಟ್‌ನ್ನು ಭರ್ತಿ ಮಾಡುವ ಬಗ್ಗೆ ವಿದ್ಯಾರ್ಥಿಗಳಿಗೆ ಅಗತ್ಯ ಮಾಹಿತಿ ನೀಡಿದರು.

ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ, ಪರೀಕ್ಷಾ ಕೇಂದ್ರದ ನೋಡೆಲ್ ಆಫೀಸರ್ ಸಂತೋಷ್, ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಉಮೇಶ್ ಕರ್ಣಿಕ್, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲೆಯ ಅಧ್ಯಾಪಕರು ಉಪಸ್ಥಿತರಿದ್ದರು.

Exit mobile version