ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಅಂಚೆ ಇಲಾಖೆಯಲ್ಲಿ 41 ವರ್ಷ ಹಾಗೂ ಗಂಗೊಳ್ಳಿ ಉಪ ಅಂಚೆ ಕಛೇರಿಯಲ್ಲಿ ಪೋಸ್ಟ್‌ಮ್ಯಾನ್ ಆಗಿ 11ವರ್ಷ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಬಾಬಣ್ಣ ಬಳೆಗಾರ್ ಅವರನ್ನು ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕಾರ್ಯದರ್ಶಿ ಎಂ.ನಾಗೇಂದ್ರ ಪೈ, ರೋಟರಿ ಜಿಲ್ಲೆಯ ಮಾಜಿ ಅಸಿಸ್ಟೆಂಟ್ ಗವರ್ನರ್ ಎಚ್.ಗಣೇಶ ಕಾಮತ್, ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗಂಗೊಳ್ಳಿ ರೋಟರಿ ಮಾಜಿ ಅಧ್ಯಕ್ಷರಾದ ಉಮೇಶ ಮೇಸ್ತ, ಕೆ.ರಾಮನಾಥ ನಾಯಕ್, ವಾಸುದೇವ ಶೇರುಗಾರ್, ಶಿವಾನಂದ ಪೂಜಾರಿ, ನಿಯೋಜಿತ ಅಧ್ಯಕ್ಷ ರಾಜೇಶ ಎಂ.ಜಿ, ಗಂಗೊಳ್ಳಿ ರೋಟರಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.