ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಅಲ್ಪಸಂಖ್ಯಾತ ಇಲಾಖೆಯಿಂದ ಅಲ್ಪಸಂಖ್ಯಾತ ವಿದ್ಯಾರ್ಥಿಳಿಗೆ ನೀಡಲಾಗುವ ವಿದ್ಯಾರ್ಥಿ ವೇತನಕ್ಕೆ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಪ್ರಕ್ರಿಯು ಕಠಿಣವಾಗಿದ್ದು, ಮೂರ್ನಾಲ್ಕು ಮಟ್ಟದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಕೇವಲ ಹೆಸರಿನಲ್ಲಿ ಒಂದೆರಡು ಅಕ್ಷರಗಳು ತಾಂತ್ರಿಕ ಕಾರಣದಿಂದಾಗಿ ಬದಲಾಗಿದ್ದರೆ ಅವರಿಗೆ ಸಿಗಬೇಕಾದ ವಿದ್ಯಾರ್ಥಿವೇತನದಿಂದ ಅವರು ವಂಚಿತರಾಗುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸರಕಾರವು ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸುವ ಕ್ರಿಯೆಯನ್ನು ಸರಳಗೊಳಿಸಿ ಅಗತ್ಯ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವ ಜವಾಬ್ದಾರಿಯನ್ನರಿತು ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಈ ಹಿಂದೆ ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿವೇತನ ಸಿಗದೇ ಹೆಚ್ಚು ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಮತ್ತು ಅಗಾಧ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಕೋವಿಡ್ ಹಿನ್ನೆಲೆಯಿಂದ ಘೋಷಿಸಲಾದ ಲಾಕ್ ಡೌನ್ ಸಮಸ್ಯೆಯಿಂದಾಗಿ ಆರ್ಥಿಕ ಸಂಕಷ್ಟದಿಂದ ಶಿಕ್ಷಣವನ್ನು ಮೊಟಕುಗೊಳಿಸಿ ಕೂಲಿ ಕೆಲಸ, ಉದ್ಯೋಗದ ಕಡೆಗೆ ಒಲವು ತೋರುತ್ತಿದ್ದಾರೆ. ಇದು ಬಹಳ ಗಂಭೀರವಾದ ಪಿಡುಗಾಗಿ ಸಮಾಜವನ್ನು ಉನ್ನತ ಶಿಕ್ಷಣದಿಂದ ವಂಚಿತ ಸಮಾಜವಾಗಿ ಪರಿವರ್ತಿಸುತ್ತಿದೆ. ಇದನ್ನು ಸರಿದೂಗಿಸಲು ಸರಕಾರ ಕ್ರಿಯಾಶೀಲ ಕ್ರಮಗಳನ್ನು ತಗೆದುಕೊಂಡು, ಅಲ್ಪಸಂಖ್ಯಾತ ಇಲಾಖೆಯಿಂದ ನೀಡುವ ವಿದ್ಯಾರ್ಥಿವೇತನವನ್ನು ಹೆಚ್ಚಿಸಿ ಇನ್ನೂ ಬರದೆ ಬಾಕಿಯಾಗಿರುವ ವಿದ್ಯಾರ್ಥಿವೇತನವನ್ನು ತಕ್ಷಣವಾಗಿ ಬಿಡುಗೊಳಿಸಬೇಕೆಂದು ಕ್ಯಾಂಪಸ್ ಫ್ರಂಟ್ ಆಗ್ರಹಿಸುತ್ತದೆ.
ಕ್ಯಾಂಪಸ್ ಫ್ರಂಟ್ ಕುಂದಾಪುರದ ಅಧ್ಯಕ್ಷ ಫಯೀಜ್ ಬಸ್ರೂರು, ಕುಂದಾಪುರ ತಾಲ್ಲೂಕಿನ ಅಲ್ಪಸಂಖ್ಯಾತರ ಕಚೇರಿಗೆ ಭೇಟಿ ನೀಡಿ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ವೇತನದ ವಿಳಂಬದಿಂದಾಗಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಅತೀ ಸೂಕ್ಷ್ಮವಾಗಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಮುಜಾಹಿದ್ ಗಂಗೊಳ್ಳಿ, ಖಜಾಂಚಿ ಸಹಾದ್ ಬಸ್ರೂರು ಮತ್ತು ಜಿಲ್ಲಾ ಸಮಿತಿ ಸದಸ್ಯ ಸಿಯಾನ್ ಬಸ್ರೂರು ಉಪಸ್ಥಿತರಿದ್ದರು.