ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇವರ ಆಶ್ರಯಲ್ಲಿ ವೈದ್ಯರ ದಿನಾಚರಣೆ ಪ್ರಯುಕ್ತ ಇಬ್ಬರು ವೈದ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಗಂಗೊಳ್ಳಿಯ ಸ.ವಿ.ಪದವಿಪೂರ್ವ ಕಾಲೇಜಿನ ವಠಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ವೈದ್ಯರಾದ ಡಾ.ಕಾಶೀನಾಥ ಪೈ ಮತ್ತು ಡಾ. ಕೃಪಾಶ್ರೀ ಅವರನ್ನು ಗೌರವಿಸಲಾಯಿತು. ಗಂಗೊಳ್ಳಿ ರೋಟರಿ ಕ್ಲಬ್‌ನ ಸದಸ್ಯರು ಉಪಸ್ಥಿತರಿದ್ದರು.
ಗಂಗೊಳ್ಳಿ ರೋಟರಿ ಕ್ಲಬ್‌ನ ನೂತನ ಅಧ್ಯಕ್ಷ ರಾಜೇಶ್ ಎಂ.ಜಿ ಸ್ವಾಗತಿಸಿದರು. ರೋಟರಿ ಜಿಲ್ಲೆ ವಲಯ ೧ರ ಜೋನಲ್ ಅಸಿಸ್ಟೆಂಟ್ ಕೆ.ರಾಮನಾಥ ನಾಯಕ್ ಪ್ರಾಸ್ತಾವಿಕ ಮಾತನಾಡಿದರು. ರೋಟರಿ ಕಾರ್ಯದರ್ಶಿ ನಾರಾಯಣ ಈ. ನಾಯ್ಕ ವಂದಿಸಿದರು.