Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ 3ನೇ ಮನೆ ‘ಶ್ರೀ ವರಲಕ್ಷ್ಮೀ ನಿಲಯ’ ಹಸ್ತಾಂತರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಕೊಡೇರಿ ಎಂಬಲ್ಲಿ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲಾಗಿರುವ ‘ಶ್ರೀ ವರಲಕ್ಷ್ಮೀ ನಿಲಯ’ ನೂತನ ಗೃಹದ ಹಸ್ತಾಂತರ ಸಮಾರಂಭ ಶುಕ್ರವಾರ ಜರುಗಿತು.

ಉದ್ಯಮಿ ಹಾಗೂ ಮ್ಯಾನೇಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರ ತಂದೆ ತಾಯಿ ಬಾಬು ಪೂಜಾರಿ ಹಾಗೂ ಮಂಜಮ್ಮ ದಂಪತಿಗಳು ನೂತನ ಗೃಹವನ್ನು ಉದ್ಘಾಟಿಸಿದರು. ಗೋವಿಂದ ಪೂಜಾರಿ ಅವರ ಮಗ ಪ್ರಜ್ವಲ್ ಜಿ. ಪೂಜಾರಿ ಅವರ ಜನ್ಮದಿನದಂದು ಕೊಡೇರಿಯ ರವಳು ನಾಗಮ್ಮ ಅವರಿಗೆ ಬೀಗದ ಕೈ ಹಸ್ತಾಂತರಿಸಲಾಯಿತು.

ಶ್ರೀ ವರಲಕ್ಷ್ಮೀ ಈ ಸಂದರ್ಭ ಮ್ಯಾನೇಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರು ಮಾತನಾಡಿ ಟ್ರಸ್ಟೀ ಮೂಲಕ ನಿರ್ಮಿಸಲಾಗಿರುವ ಮೂರನೇ ಮನೆ ಇದಾಗಿದ್ದು, ಇನ್ನು ಒಂದು ಮನೆಗಳು ನಿರ್ಮಾಣ ಹಂತದಲ್ಲಿದೆ. ಆರೋಗ್ಯ ಸೇವೆ, ಅಗತ್ಯವುಳ್ಳವರಿಗೆ ನೆರವು, ಪುಡ್ ಕಿಟ್ ವಿತರಣೆ ಸೇರಿದಂತೆ ಹತ್ತಾರು ಸಾಮಾಜಿಕ ಕಾರ್ಯಗಳನ್ನು ಟ್ರಸ್ಟ್ ಮೂಲಕ ಮಾಡಲಾಗುತ್ತಿದೆ ಎಂದರು.

ಈ ಸಂದರ್ಭ ಜಿ.ಪಂ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ, ತಾ.ಪಂ ಮಾಜಿ ಅಧ್ಯಕ್ಷ ಮಹೇಂದ್ರ ಪೂಜಾರಿ, ಜಿ.ಪಂ ಮಾಜಿ ಸದಸ್ಯೆ ಗೌರಿ ದೇವಾಡಿಗ, ಗ್ರಾಮ ಪಂಚಾಯತ್ ಕಿರಿಮಂಜೇಶ್ವರ ಅಧ್ಯಕ್ಷೆ ಗೀತಾ, ಉಪಾಧ್ಯಕ್ಷ ಶೇಖರ್ ಖಾರ್ವಿ, ಕೊಡೇರಿ ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ರಾಘವೇಂದ್ರ ಪೂಜಾರಿ, ಆನಂದ ಪೂಜಾರಿ ಕೊಡೇರಿ, ರವಿರಾಜ್ ಪೂಜಾರಿ ಕೊಡೇರಿ, ಭಾಸ್ಕರ್ ಪೂಜಾರಿ ಕೊಡೇರಿ, ಮೀನುಗಾರ ಮುಖಂಡ ಸಿ.ಎಸ್ ಖಾರ್ವಿ ಕೊಡೇರಿ, ನಿವೃತ್ತ ಶಿಕ್ಷಕ ಶ್ರೀನಿವಾಸ್ ಮಾಸ್ಟರ್ ಮೊದಲಾದವರು ಉಪಸ್ಥಿತರಿದ್ದರು.ಶಿಕ್ಷಕ ಸತ್ಯನಾ ಕೊಡೇರಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Exit mobile version