ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರ್ವ ಸಿದ್ಧತಾ ಸಭೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಮಾಹಿತಿ ನೀಡಿ ಮಾತನಾಡಿದ ಗಂಗೊಳ್ಳಿ ಕ್ಲಸ್ಟರ್‌ನ ಸಮೂಹ ಸಂಪನ್ಮೂಲ ವ್ಯಕ್ತಿ ಸೌಪರ್ಣಿಕಾ, ಕೋವಿಡ್-19 ಹಿನ್ನಲೆಯಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಅತ್ಯಂತ ಜಾಗರೂಕತೆಯಿಂದ ಯಶಸ್ವಿಯಾಗಿ ನಡೆಸಬೇಕಾದ ಜವಾಬಾರಿ, ಹೊಣೆಗಾರಿಕೆ ಎಲ್ಲಾ ಶಿಕ್ಷಕರ ಮೇಲಿದೆ. ಪರೀಕ್ಷೆ ಸಮಯದಲ್ಲಿ ಕೈಗೊಳ್ಳಬೇಕಾದ ಸುರಕ್ಷತೆಗಳ ಬಗ್ಗೆ ಮಾಹಿತಿ ನೀಡಿದ ಅವರು ಪರೀಕ್ಷೆ ಸಮಯದಲ್ಲಿ ಮಕ್ಕಳಲ್ಲಿ ಧೈರ್ಯ, ಆತ್ಮವಿಶ್ವಾಸ ತುಂಬಬೇಕು ಎಂದರು.
ಪ್ರಶ್ನೆ ಪತ್ರಿಕೆ ವಿತರಣೆ, ಸಂಗ್ರಹ ಹಾಗೂ ಪರೀಕ್ಷೆ ಸಿದ್ಧತೆಗಳ ಬಗ್ಗೆ ಕಾಲೇಜಿನ ಗುಮಾಸ್ತ ಶ್ರೀಧರ ಗಾಣಿಗ ಮಾಹಿತಿ ನೀಡಿದರು. ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಉಮೇಶ ಕರ್ಣಿಕ, ಎಸ್ಸೆಸ್ಸೆಲ್ಸಿ ಪರೀಕ್ಷೆಯ ಯಶಸ್ಸಿಗೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿ, ಪರೀಕ್ಷೆಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಸಹಕರಿಸುವಂತೆ ಮನವಿ ಮಾಡಿದರು. ಕೊಠಡಿ ಮೇಲ್ವಿಚಾರಕರು, ಕಾಲೇಜಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.