ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : 2021ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಸನ್ನಾ ಪೈ 600ರಲ್ಲಿ 600 ಅಂಕ ಗಳಿಸಿ ಅದ್ಭುತ ಸಾಧನೆ ಮಾಡಿದ್ದಾರೆ.
ಇಂಗ್ಲೀಷ್-100, ಸಂಸ್ಕೃತ-100, ಭೌತಶಾಸ್ತ್ರ-100, ರಸಾಯನಶಾಸ್ತ್ರ-100, ಗಣಿತ-100 ಮತ್ತು ಜೀವಶಾಸ್ತ್ರದಲ್ಲಿ-100ಅಂಕಗಳೊಂದಿಗೆ ಒಟ್ಟು600 ಅಂಕಗಳಿಸಿ ಕಾಲೇಜಿಗೆ ಹಾಗೂ ಗಂಗೊಳ್ಳಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕೂಡ ಈಕೆ ಶಾಲೆಗೆ ಮತ್ತು ಗಂಗೊಳ್ಳಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಳು. ಈಕೆ ಗಂಗೊಳ್ಳಿಯ ಪತ್ರಕರ್ತ ಬಿ.ರಾಘವೇಂದ್ರ ಪೈ ಮತ್ತು ರಾಧಿಕಾ ಆರ್.ಪೈ ದಂಪತಿಯ ಪುತ್ರಿ. ಈಕೆಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸರು ಹಾಗೂ ಕುಟುಂಬಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.