ಕುಂದಾಪುರ: ಪ್ರತಿಯೋರ್ವ ವ್ಯಕ್ತಿಗೂ ಕೆಲವು ಸಾಮರ್ಥ್ಯಗಳು ಹಾಗೂ ಕೆಲವು ನ್ಯೂನತೆಗಳಿರುತ್ತವೆ. ನಾವು ಅವುಗಳನ್ನು ಅರಿತು ನಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಿದರೆ ನಾವು ಮಾಡುತ್ತಿರುವ ಕೆಲಸದಲ್ಲಿ ಜಯವನ್ನು ಸಾಧಿಸಲು ಸಾಧ್ಯ ಎಂದು ಭಂಡಾರ್‌ಕಾರ್ಸ್ ಕಾಲೇಜಿನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಿ.ಎಮ್.ಗೊಂಡ ಹೇಳಿದರು.
ಅವರು ಇಂದು (ಸೆ. 09) ಜೇಸಿಐ ಕುಂದಾಪುರ ಸಿಟಿ ಆಶ್ರಯದಲ್ಲಿ ನಡೆಯುತ್ತಿರುವ ಜೇಸಿ ಸಪ್ತಾಹದ ಅಂಗವಾಗಿ ರೋಟರಿ ಕ್ಲಬ್ ಕುಂದಾಪುರದ ಸಹಭಾಗಿತ್ವದಲ್ಲಿ ಭಂಡಾರ್‌ಕಾರ್ಸ್ಸ ಕಾಲೇಜಿನಲ್ಲಿ ನಾಯಕತ್ವ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಜೇಸಿಐ ಕುಂದಾಪುರ ಸಿಟಿ ಅಧ್ಯಕ್ಷ ಚಂದ್ರಕಾಂತ ವಹಿಸಿದ್ದರು.
ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು, ಸಿಟಿ ಜೇಸಿಸ್ ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ, ಪೂರ್ವಧ್ಯಕ್ಷರುಗಳಾದ ಕೆ. ಕಾರ್ತೀಕೇಯ ಮಧ್ಯಸ್ಥ, ರಾಘವೇಂದ್ರಚರಣ ನಾವುಡ, ತರಬೇತುದಾರರಾದ ಅವಿನಾಶ ಕಾಮತ್ ಉಪಸ್ಥಿತರಿದ್ದರು.
ಚರಣ ಸುವರ್ಣ ಹಾಗೂ ಯುವ ಜೇಸಿ ಅಧ್ಯಕ್ಷ ಸನತ್ ಶೇಟ್ ಕಾರ್ಯಕ್ರಮ ನಿರೂಪಿಸಿ, ಗೌತಮ್ ನಾವಡ ವಂದಿಸಿದರು.