Site icon Kundapra.com ಕುಂದಾಪ್ರ ಡಾಟ್ ಕಾಂ

ಕೊಲ್ಲೂರು: ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ಚೇತರಿಕೆಗೆ ದೇವಳದಲ್ಲಿ ಪೂಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸದಸ್ಯರಾದ ಆಸ್ಕರ್ ಫೆರ್ನಾಂಡಿಸ್ ಅವರು ಅನಾರೋಗ್ಯದಿಂದ ಬಳಲುತಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಶೀಘ್ರ ಗುಣಮುಖರಾಗುವಂತೆ ಬೈಂದೂರು ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಂದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಕೆ ರಮೇಶ್ ಗಾಣಿಗ, ಗ್ರಾಮ ಪಂಚಾಯತ್ ಸದಸ್ಯ ಕೆ ಪ್ರಕಾಶ್ ಪೂಜಾರಿ, ಕಾಂಗ್ರೆಸ್ ಮುಖಂಡ ವಾಸುದೇವ್ ಯಡಿಯಾಳ, ಚಂದ್ರ ಬಳೆಗಾರ, ವಾಸು ಮೊಗವೀರ, ನಾರಾಯಣ ಶೆಟ್ಟಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು. ಕೆ. ರಮೇಶ್ ಗಾಣಿಗ ಕುಟುಂಬದವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದಲ್ಲಿ ಒಂದು ಹೊತ್ತಿನ ಅನ್ನದಾನ ಸೇವೆಯನ್ನು ನೀಡಿದರು.

Exit mobile version