Kundapra.com ಕುಂದಾಪ್ರ ಡಾಟ್ ಕಾಂ

ಕಾರಂತ ಥೀಮ್ ಪಾರ್ಕ್‌ಗೆ ಕನ್ನಡ ಮತ್ತು ಸಂಸ್ಕೃತಿಯ ನಿರ್ದೇಶಕ ಎಸ್. ರಂಗಪ್ಪ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ:
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತರು ಬದುಕಿನೂದಕ್ಕು ನುಡಿದಂತೆ ಬದುಕಿ ಮಾದರಿ ಆದವರು ಅವರ ಬದುಕೇ ಅವರ ಸಂದೇಶದಂತೆ ಎಲ್ಲಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸಾಧನೆ ಮಾಡಿ ಎಲ್ಲಾರಿಗೂ ಮಾದರಿಯಾದ ಮಹಾನ್ ಚೇತನ ಇದು ಸಮಾಜಕ್ಕೆ ತಲುಪಿಸುವ ಕಾರ್ಯವಾಗಬೇಕು ಎಂದು ಕನ್ನಡ ಮತ್ತು ಸಂಸ್ಕೃತಿಯ ನಿರ್ದೇಶಕ ಎಸ್ ರಂಗಪ್ಪ ಕ.ಆ.ಸೇ ಅವರು ಹೇಳಿದರು.

ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಭೇಟಿ ನೀಡಿ ಕೆರೆ ಮಧ್ಯದ ಕಾರಂತರ ಕಂಚಿನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ರಂಗಮಂದಿರ, ಆರ್ಟ್ ಗ್ಯಾಲರಿ, ಅಂಗನವಾಡಿ, ಮಿನಿ ರಂಗಮಂದಿರ, ಗ್ರಂಥಾಲಯ ವೀಕ್ಷಿಸಿದರು.

ಥೀಮ್ ಪಾರ್ಕ್‌ನಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ-ಸಾಹಿತ್ಯಿಕ ಕಾರ್ಯಕ್ರಮ, ತರಭೇತಿ, ವಿವಿಧ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದು ಕಾರಂತರ ಬದುಕಿನ ಅನಾವರಣಕ್ಕೆ ಥೀಮ್ ಪಾರ್ಕ್ ಸಹಕಾರಿ ಎಂದು ಶ್ಲಾಘಿಸಿದರು.

ಕಾರಂತ ಥೀಮ್ ಅಭಿವೃದ್ಧಿ ಬಗ್ಗೆ ಚರ್ಚೆ
ಕಾರಂತ ಥೀಮ್ ಪಾರ್ಕ್‌ನಲ್ಲಿ ಇನ್ನಷ್ಟೂ ಹೊಸ ಯೋಜನೆ ರೂಪಿಸಿಕೊಂಡು ಕಾರಂತರ ಕುರಿತಾದ ಚಟುವಟಿಕೆಯನ್ನು ಇನ್ನಷ್ಟೂ ನಡೆಸುವ ಬಗ್ಗೆ ಕಾರಂತ ಟ್ರಸ್ಟ್ ರಿ. ಉಡುಪಿ, ಕಾರಂತ ಪ್ರತಿಷ್ಠಾನ ರಿ. ಕೋಟ, ಕೋಟತಟ್ಟು ಗ್ರಾಮ ಪಂಚಾಯತ್‌ನ ಜಂಟಿ ಸಭೆಯನ್ನು ನಿರ್ದೇಶಕರ ಉಪಸ್ಥಿತಿಯಲ್ಲಿ ನಡೆಸಲಾಯಿತು. ಕಾರಂತ ಥೀಮ್ ಪಾರ್ಕ್ ಬೆಳವಣಿಗೆಗೆ ಪೂರಕವಾದ ವ್ಯವಸ್ಥೆ ನಿರ್ಮಾಣಕ್ಕೆ ಎಲ್ಲರ ಅಭಿಪ್ರಾಯ ಪಡೆದುಕೊಂಡರು.

ಕಾರಂತ ಥೀಮ್ ಪಾರ್ಕ್ ಪರಿಚಾಯಿಕೆ ಉದ್ಘಾಟನೆ
ಕಾರಂತ ಥೀಮ್ ಪಾರ್ಕ್‌ನ ವಿಶೇಷತೆ ಒಳಗೊಂಡ ಹಾಗೂ ಚಟುವಟಿಕೆಯ ಬಗ್ಗೆ ಮಾಹಿತಿಯ ಕರಾವಳಿ ಕರ್ನಾಟಕದ ಸಾಹಿತ್ಯಿಕ-ಸಾಂಸ್ಕೃತಿಕ ಕಣ್ಮಣಿ ಪರಿಚಾಯಿಕೆಯನ್ನು ಮಾನ್ಯ ನಿರ್ದೇಶಕರು ಬಿಡುಗಡೆಗೊಳಿಸಿದರು. ಇದರಲ್ಲಿ ಥೀಮ್ ಪಾರ್ಕ್‌ನಲ್ಲಿ ವೀಕ್ಷಣೆಗೆ ಏನಿದೆ, ಕಾರ್ಯಕ್ರಮ, ತರಭೇತಿ, ಎಲ್ಲ ಒಳಗೊಂಡ ಪರಿಚಯ ಇದರಲ್ಲಿದೆ.

ಈ ಸಂದರ್ಭದಲ್ಲಿ ಉಡುಪಿ ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿದೇಶಕ ಕುಮಾರ್ ಬೆಕ್ಕೇರಿ, ಮಂಗಳೂರು ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿದೇಶಕ ರಾಜೇಶ್ , ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ್ ಮೂರ್ತಿ, ಕೋಟ ಹೋಬಳಿಯ ಕಂದಾಯ ನಿರೀಕ್ಷಕ ರಾಜು, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಉಪಾಧ್ಯಕ್ಷ ವಾಸು ಪೂಜಾರಿ, ಪಿಡಿಓ ಶೈಲಾ ಎಸ್ ಪೂಜಾರಿ, ಕಾರಂತ ಟ್ರಸ್ಟ್ ಸದಸ್ಯರಾದ ಮಾಲಿನಿ ಮಲ್ಯ, ಶ್ರೀಧರ್ ಹಂದೆ, ಪ್ರೊ. ಉಪೇಂದ್ರ ಸೋಮಯಾಜಿ, ಡಾ.ಜಗದೀಶ್ ಶೆಟ್ಟಿ, ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಸದಸ್ಯ ಯು.ಎಸ್ ಶೆಣೈ ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ಬಾರಿಕೆರೆ, ಸರಸ್ವತಿ, ವಿದ್ಯಾ ಸಾಲಿಯಾನ್, ಗ್ರಾಮಕರಣಿಕ ಚೆಲುವರಾಜ್ ಹಾಗೂ ಥೀಮ್ ಪಾರ್ಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version