ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಛೇರಿಗೆ ನುಗ್ಗಿ ಫೈನಾನ್ಸ್ ಮಾಲೀಕನನ್ನು ಬರ್ಬರವಾಗಿ ಕೊಲೆಗೈದ ಘಟನೆ ನಡೆದಿದೆ ಕಾಳವಾರ ಸಮೀಪ ನಡೆದಿದೆ. ಮೃತ ವ್ಯಕ್ತಿಯನ್ನು ಯಡಾಡಿ ಮತ್ಯಾಡಿ ನಿವಾಸಿ ಅಜೇಂದ್ರ ಶೆಟ್ಟಿ (33) ಎಂದು ಗುರುತಿಸಲಾಗಿದೆ.
ತಡರಾತ್ರಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಅಜೇಂದ್ರ ಶೆಟ್ಟಿ ಕಾಳಾವರದಲ್ಲಿ ಅನೂಪ್ ಎಂಬುವವರೊಂದಿಗೆ ಪಾಲುದಾರಿಕೆಯಲ್ಲಿ ಡ್ರೀಮ್ ಫೈನಾನ್ಸ್ ವ್ಯವಹಾರ ನಡೆಸಿಕೊಂಡಿದ್ದರು. ಶುಕ್ರವಾರ ರಾತ್ರಿ ಮನೆಗೆ ಬಂದಿರಲಿಲ್ಲ. ಆತನಿಗೆ ಫೋನ್ ಮಾಡಿದಾಗ ಸಂಪರ್ಕಕ್ಕೆ ಸಿಗದ ಕಾರಣ ಸ್ನೇಹಿತರಿಗೆ ಫೊನ್ ಮಾಡಿ ರಾತ್ರಿ ಕಾಳಾವರಕ್ಕೆ ಬಂದು ಫೈನಾನ್ಸ್’ನಲ್ಲಿ ನೋಡುವಾಗ ಫೈನಾನ್ಸ್’ನ ರೂಮಿನಲ್ಲಿ ಅಜೇಂದ್ರ ಶೆಟ್ಟಿಯು ಕುಳಿತಲ್ಲಿಯೇ ವಾಲಿಕೊಂಡು ಬಿದ್ದಿದ್ದು, ಆತನ ಕೆನ್ನೆಯ ಬಳಿ ಕಡಿದ ಗಾಯವಾಗಿ ರಕ್ತ ಹರಿಯುತ್ತಿತ್ತು. ಕೂಡಲೇ ಕೋಟೇಶ್ವರ ಎನ್.ಆರ್ ಆಚಾರ್ಯ ಆಸ್ವತ್ರೆಗೆ ಕರೆದುಕೊಂಡು ಹೋಗಿದ್ದು ವೈದ್ಯರು ಅಜೇಂದ್ರನನ್ನು ಪರೀಕ್ಷಿಸಿದಾಗ ಮೃತಪಟ್ಟಿದ್ದರು.
ಕಳೆದ ಐದು ವರ್ಷಗಳಿಂದ ಅಸೋಡು-ಕಾಳಾವರ ಎಂಬಲ್ಲಿ ಫೈನಾನ್ಸ್ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ವ್ಯವಹಾರ ವಿಚಾರದಲ್ಲಿ ನಡೆದಿರಬಹುದೆಂದು ಅಂದಾಜಿಸಲಾಗಿದೆ. ನಿಖರ ಕಾರಣ ಪೊಲೀಸ್ ತನಿಖೆ ಯಿಂದ ಬೆಳಕಿಗೆ ಬರಬೇಕಾಗಿದೆ. ಕುಂದಾಪುರ ಗ್ರಾಮಾಂತರ ಕಂಡ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.