Site icon Kundapra.com ಕುಂದಾಪ್ರ ಡಾಟ್ ಕಾಂ

ಅಂತರರಾಷ್ಟ್ರೀಯ ಮಟ್ಟದ ವಿವಿಧ ಕ್ರೀಡಾಪಟುಗಳಿಗೆ ನಗದು ಬಹುಮಾನ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
2020ನೇ ಸಾಲಿನಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಕರ್ನಾಟಕವನ್ನು ಅಧಿಕೃತವಾಗಿ ಪ್ರತಿನಿಧಿಸಿ ಪದಕ ಪಡೆದ ಹಾಗೂ ಅಂತರರಾಷ್ರೀಯ ಮಟ್ಟದ ವಿವಿಧ ಕ್ರೀಡಾಪಟುಗಳಿಗೆ ನಗದು ಬಹುಮಾನ ನೀಡಲಾಗುತ್ತಿದೆ.

ಅರ್ಹ ಕ್ರೀಡಾಪಟುಗಳು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಉಡುಪಿ ಇವರಿಂದ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ದೃಢೀಕೃತ ದಾಖಲೆಗಳೊಂದಿಗೆ ಇದೇ ಆಗಸ್ಟ್ 25 ರೊಳಗೆ ಹಿಂತಿರುಗಿಸಲು ಕೋರಿದೆ. ನಂತರ ಬರುವ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2521324, 9480886467 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version