Kundapra.com ಕುಂದಾಪ್ರ ಡಾಟ್ ಕಾಂ

ಪಶುಪಾಲನಾ ಇಲಾಖೆಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
2021-22ನೇ ಸಾಲಿನಲ್ಲಿ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯಡಿ 90% ಸಹಾಯಧನವನ್ನು 10% ಫಲಾನುಭವಿಗಳಿಗೆ ವಂತಿಗೆಯೊಂದಿಗೆ ಹಾಲು ಕರೆಯುವ ಯಂತ್ರ ಮತ್ತು ರಬ್ಬರ್ ನೆಲದ ಹಾಸುಗಳ ಪರಿಕರಗಳನ್ನು ವಿತರಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಫಲಾನುಭವಿಗಳನ್ನು ಆಯ್ಕೆಮಾಡಲು INAPH ಕಿವಿಯೋಲೆ ಹಾಕಿರುವ ಕನಿಷ್ಠ 2 ಮಿಶ್ರತಳಿ ಹಸುಗಳನ್ನು ಹೊಂದಿರುವ, ಪ.ಜಾತಿ/ಪ.ಪಂಗಡದ ಆಸಕ್ತ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಫಲಾನುಭವಿಗಳು ತಮ್ಮ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳಿಂದ ಅರ್ಜಿ ನಮೂನೆ ಪಡೆದು ಆಗಸ್ಟ್ 19 ರೊಳಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿಗಳು ಪಶು ಆಸ್ಪತ್ರೆ, ಉಡುಪಿ (0820-2520659), ಕಾಪು (0820-2551175), ಬ್ರಹ್ಮಾವರ (0820-2561101), ಕುಂದಾಪುರ (08254-230776), ಬೈಂದೂರು (08254-251076), ಕಾರ್ಕಳ (08258-230448) ಮತ್ತು ಹೆಬ್ರಿ (08253-251203)ನ್ನು ಸಂಪರ್ಕಿಸುವAತೆ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಉಪನಿರ್ದೇಶಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version