ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಆಯೋಜಿಸಿರುವ ಡಾ. ಹೆಚ್. ಶಾಂತರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಅ.13ರ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಆರ್.ಎನ್ ಶೆಟ್ಟಿ ಹಾಲ್‌ನಲ್ಲಿ ನಡೆಯಲಿದೆ.
ಈ ವರ್ಷದ ಡಾ. ಎಚ್. ಶಾಂತರಾಮ್ ಸಾಹಿತ್ಯ ಪ್ರಶಸ್ತಿಯು ಅನುಪಮಾ ಪ್ರಸಾದ್ ಅವರ ಪಕ್ಕಿ ಹಳ್ಳದ ಹಾದಿಗುಂಟ ಕಾದಂಬರಿಗೆ ನೀಡಲಾಗುತ್ತಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥರಾದ ಕೆ. ಶಾಂತರಾಮ ಪ್ರಭು ವಹಿಸಲಿದ್ದಾರೆ.