ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಟೀಮ್ ಕುಂದಾಪುರಿಯನ್ಸ್ ತಂಡದಿಂದ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ಕುಂದಾಪ್ರ ಕನ್ನಡ ದಿನಾಚರಣೆಯಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಕುಂದಾಪುರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪರಿಶ್ರಮದಿಂದಲೇ ಬದುಕು ಕಟ್ಟಿಕೊಂಡ ಉದ್ಯಮಿ ಗೋವಿಂದ ಬಾಬು ಪೂಜಾರಿ ಶೆಫ್ಟಾಕ್ ಪುಡ್ & ಹಾಸ್ಪಿಟಾಲಿಟಿ ಸಂಸ್ಥೆಯಿಂದ ಸಾವಿರಾರು ಜನರಿಗೆ ಉದ್ಯೋಗ ನೀಡಿದ್ದಾರೆ. ಕರೋನಾ ಸಂದರ್ಭದಲ್ಲಿ ಸಾವಿರಾರು ಬಡ ಕುಟುಂಬಗಳಿಗೆಪುಡ್ ಕಿಟ್ ವಿತರಿಸಿದ್ದಾರೆ. ಹೂಟ್ಟೂರಿನಲ್ಲಿ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಸೂರಿಲ್ಲದವರಿಗೆ ಮನೆ ನಿರ್ಮಿಸಿಕೊಟ್ಟು ಬಡಕುಟುಂಬಗಳಿಗೆ ನೆರಳಾಗಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಕುಡಿಯುವ ನೀರಿನ ದಾಹ ತೀರಿಸಿದ್ದು ಸೇರಿದಂತೆ ಹತ್ತಾರು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಪ್ರಶಸ್ತಿ ಪ್ರದಾನದ ವೇಳೆ ಗಣ್ಯರು, ಟೀಮ್ ಕುಂದಾಪುರಿಯನ್ಸ್ ತಂಡದ ಸದಸ್ಯರು ಉಪಸ್ಥಿತರಿದ್ದರು.