Site icon Kundapra.com ಕುಂದಾಪ್ರ ಡಾಟ್ ಕಾಂ

ನಿವೃತ್ತ ಪ್ರಾಂಶುಪಾಲ ಬಿ. ರಘುರಾಮ ಶೆಟ್ಟಿ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಗ್ಗರ್ಸೆ ನಿವಾಸಿ ನಿವೃತ್ತ ಪ್ರಾಂಶುಪಾಲ ಬಾಳ್‌ಕುದ್ರು ರಘುರಾಮ ಶೆಟ್ಟಿ (88) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಮಂಗಳೂರಿನ ಸರ್ಕಾರಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಶಿಕ್ಷಣ ಕ್ಷೇತ್ರಕ್ಕೆ ಕಾಲಿರಿಸಿದ ಇವರು ಅನೇಕ ಸರ್ಕಾರಿ ವಿದ್ಯಾ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ಕೊನೆಯಲ್ಲಿ ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ನಂತರ ಇಲ್ಲಿಯೇ ನಿವೃತ್ತಿಯಾಗಿದ್ದರು. 1986-87ನೇ ಸಾಲಿನಲ್ಲಿ ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಇವರು ಬೈಂದೂರು ತಾಲೂಕು ರಚನಾ ಹೋರಾಟ ಸಮಿತಿ ಸದಸ್ಯರಾಗಿದ್ದರು. ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಹಾಗೂ ಸಂಘ-ಸಂಸ್ಥೆಗಳಲ್ಲಿ ಸಕ್ರೀಯವಾಗಿದ್ದ ಇವರು ಜೀವಿತದ ಕೊನೆಯ ತನಕ ಆಸಕ್ತ ಮಕ್ಕಳಿಗೆ ಪಾಠ, ಉಪನ್ಯಾಸ ನೀಡುತ್ತಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

Exit mobile version