Kundapra.com ಕುಂದಾಪ್ರ ಡಾಟ್ ಕಾಂ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಶುಭದಾ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ಶುಭದಾ ಆಂಗ್ಲ ಮಾಧ್ಯಮ ಶಾಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಿರಂತರವಾಗಿ ಶೇಕಡಾ 100 ಫಲಿತಾಂಶವನ್ನು ದಾಖಲಿಸುತ್ತ ಬಂದಿದ್ದು 2020-21ನೇ ಸಾಲಿನ ಶಾಲಾವಾರು ಫಲಿತಾಂಶ ಗುಣಮಟ್ಟದಲ್ಲಿ ‘ಎ’ಗ್ರೇಡ್ ಪಡೆದಿದೆ.

ವಿದ್ಯಾರ್ಥಿಗಳಾದ ಸ್ವೀಕೃತಿ ಶೆಟ್ಟಿ 99.04% , ಪ್ರಣಮ್ಯ ಚಾತ್ರ 96.16% ಮತ್ತು ಸಂಜಿತಾ 93.44% ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು ಮತ್ತು ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿನೆ ಸಲ್ಲಿಸಿದ್ದಾರೆ.

Exit mobile version