Kundapra.com ಕುಂದಾಪ್ರ ಡಾಟ್ ಕಾಂ

ಜೇಸಿಐ ಕುಂದಾಪುರ ಸಿಟಿ ಜೇಸಿ ಸಪ್ತಾಹ ಉದ್ಘಾಟನೆ

ಸಂಘಟನೆ, ಸ್ವಸ್ಥ ಚಿಂತನೆಯಿಂದ ಉತ್ತಮ ಸಮಾಜ ನಿರ್ಮಾಣ : ಕೋಟ ಶ್ರೀನಿವಾಸ ಪೂಜಾರಿ

ಕುಂದಾಪುರ: ಸಮಾಜದ ಸರ್ವಾಂಗೀಣ ವಿಕಾಸದ ದೃಷ್ಠಿಯಿಂದ ಪ್ರತಿಯೊಬ್ಬರು ಸಾಮಾಜಿಕ ಬದ್ಧತೆಯೊಂದಿಗೆ ಕಾರ್ಯನಿರ್ವಹಿಸುವತ್ತ ಆಸಕ್ತಿಯನ್ನು ಬೆಳೆಸಿ ಕೊಂಡಾಗ ಪರಿಸರದಲ್ಲಿ ಪರಿವರ್ತನೆ ಆರಂಭವಾಗುತ್ತದೆ. ಆದುದರಿಂದ ಸಂಘಟನೆ, ಸ್ವಸ್ಥ ಚಿಂತನೆಯಿಂದ ಉತ್ತಮ ಸಮಾಜ ನಿರ್ಮಾಣ ಮಾಡುವ ಕಾಯಕದಲ್ಲಿ ಯುವ ಜನತೆ ಕಾರ್ಯಪ್ರವೃತ್ತರಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಜೇಸಿಐ ಕುಂದಾಪುರ ಸಿಟಿ ಆಶ್ರಯದಲ್ಲಿ ಕುಂದಾಪುರದ ರೋಟರಿ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ಒಂದು ವಾರಗಳ ಕಾಲ ನಡೆಯುವ ಜೇಸಿ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದರು

ಸಮಾರಂಭದ ಅಧ್ಯಕ್ಷತೆಯನ್ನು ಜೇಸಿಐ ಕುಂದಾಪುರ ಸಿಟಿ ಅಧ್ಯಕ್ಷ ಚಂದ್ರಕಾಂತ ವಹಿಸಿದ್ದರು.

ಸ್ಕೌಟ್ಸ್ ಮತ್ತು ಗೈಡ್ಸ್ ಕುಂದಾಪುರ ವಲಯದ ಅಧ್ಯಕ್ಷೆ ಶ್ರೀಮತಿ ಗುಣರತ್ನ ಅವರನ್ನು ಸನ್ಮಾನಿಸಲಾಯಿತು. ಪುಟಾಣಿ ರಾಜ ರಾಣಿ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಈ

ಸಂದರ್ಭದಲ್ಲಿ ಮಾಜಿ ರೋಟರಿ ಗವರ್ನರ್ ಎ. ಎಸ್. ಎನ್. ಹೆಬ್ಬಾರ್, ಕುಂದಾಪುರ ಪುರಸಭೆ ಅಧ್ಯಕ್ಷೆ ಶ್ರೀಮತಿ ಕಲಾವತಿ, ಕುಂದಾಪುರ ಭಂಡಾರ್‌ಕಾರ‍್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ನಾರಾಯಣ ಶೆಟ್ಟಿ,  ಸಿಟಿ ಜೇಸಿಸ್ ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ, ಜೇಸಿಐ ಕುಂದಾಪುರ ಸಿಟಿ ದಶಮಾನೋತ್ಸವ ಸಮಿತಿ ಅಧ್ಯಕ್ಷ ಕೆ. ಕಾರ್ತೀಕೇಯ ಮಧ್ಯಸ್ಥ, ಸಪ್ತಾಹ ಸಭಾಪತಿ ವಿಜಯ ಭಂಡಾರಿ, ನಿಕಟಪೂರ್ವಾಧ್ಯಕ್ಷ ನಿತಿನ್ ಅವಭೃತ, ಸಪ್ತಾಹ ಕಾರ್ಯದರ್ಶಿ ವೆಂಕಟೇಶ ಪ್ರಭು, ಖಜಾಂಚಿ ಯು. ರಾಘವೇಂದ್ರ ಭಟ್, ಜ್ಯೂನಿಯರ್ ಜೇಸಿ ಅಧ್ಯಕ್ಷ ಸನತ್ ಶೇಟ್, ಜೇಸಿರೆಟ್ ಅಧ್ಯಕ್ಷೆ ಸುನೀತಾ ಶ್ರೀಧರ್, ಸಪ್ತಾಹ ಸಂಚಾಲಕ ರಾಘವೇಂದ್ರ ಕೆ.ಸಿ, ಯೋಜನಾಧಿಕಾರಿ ಶ್ರೀಧರ ಸುವರ್ಣ ಉಪಸ್ಥಿತರಿದ್ದರು.

ಕಾರ್ಯದರ್ಶಿ ನಾಗೇಶ್ ನಾವಡ ವಂದಿಸಿದರು. ಪೂರ್ವಾಧ್ಯಕ್ಷ ರಾಘವೇಂದ್ರಚರಣ ನಾವಡ ಸಾಂಸ್ಕೃತಿಕ ಕಾರ್ಯಕ್ರಮ ನಿರ್ವಹಿಸಿದರು.

Exit mobile version