Kundapra.com ಕುಂದಾಪ್ರ ಡಾಟ್ ಕಾಂ

ವಿವಿಧ ಇಲಾಖೆ, ಸಂಸ್ಥೆಗಳ ಆಶ್ರಯದಲ್ಲಿ ಆತ್ಮಹತ್ಯೆ ತಡೆ ದಿನಾಚರಣೆ

ಕುಂದಾಪುರ: ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ವಕೀಲರ ಸಂಘ (ರಿ) ಕುಂದಾಪುರ, ಅಭಿಯೋಗ ಇಲಾಖೆ, ಆರೋಗ್ಯ ಇಲಾಖೆ, ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ತಾ.ಪಂ. ಸಭಾಂಗಣದಲ್ಲಿ ಆತ್ಮಹತ್ಯಾ ವಿರೋಧಿ ದಿನಾಚರಣೆ ಜರುಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕುಂದಾಪುರ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ರಾಜಶೇಖರ ವಿ.ಪಾಟೀಲ್ ಮಾತನಾಡಿ‌, ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನ ಮಾಡುವುದು ಅಪರಾಧ ಆದರೆ ಆತ್ಮಹತ್ಯೆ ಮಾಡಿ ಕೊಳ್ಳುವುದು ಅಪರಾಧವಲ್ಲ. ಆರ್ಥಿಕ, ಮಾನಸಿಕ ಹಾಗೂ ಸಾಮಾಜಿಕ ಒತ್ತಡವೇ ಆತ್ಮಹತ್ಯೆಗೆ ಮುಖ್ಯ ಕಾರಣವಾಗಿದೆ. ಇದಕ್ಕೆ ಪರಿಹಾರಕಂಡುಕೊಳ್ಳಲು ಶೇ.100 ರಷ್ಟು ಸಾಧ್ಯವಿಲ್ಲವಾದರೂ ಇಂಥ ದಿನಾಚರಣೆಗಳ ಮೂಲಕ ಒಂದಷ್ಟು ಜನಜಾಗೃತಿ ಮೂಡಲು ಸಾಧ್ಯ ಎಂದು ಹೇಳಿದರು.

ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಎ.ಬಿ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಿವಿಲ್‌ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಗೌರವ ಉಪಸ್ಥಿತರಿದ್ದರು.

ಮುಖ ಅತಿಥಿಗಳಾಗಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶಿರಿಯಾರ ಮುರಳೀಧರ ಶೆಟ್ಟಿ, ಸಹಾಯಜ ಸರಕಾರಿ ಅಭಿಯೋಜಕ ಸಂದೇಶ ಭಂಡಾರಿ, ತಾಲೂಕು ಆರೋಗ್ಯ ಅಧಿಕಾರಿ ಡಾ|ಚಿದಾನಂದ ಉಪಸ್ಥಿತರಿದ್ದರು.

ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯ ಮನೋವೈದ್ಯ ಪ್ರಕಾಶ್‌ ತೋಳಾರ್‌ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಆತ್ಮಹತ್ಯೆ ತಡೆ ಬಗ್ಗೆ ಮಾತನಾಡಿದರು.

ತಾಲೂಕು ಕೃಷಿ ಅಧಿಕಾರಿ ಮೋಹನ್‌ರಾಜ್‌ ಸ್ವಾಗತಿಸಿದರು. ನ್ಯಾಯವಾದಿ ಶಾನ್ಕಟ್ಟು ಉಮೇಶ್‌ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

Exit mobile version