Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲೆಯಲ್ಲಿ ಸೋಮವಾರ 107 ಕೋವಿಡ್ ಪಾಸಿಟಿವ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ, ಅ16:
ಜಿಲ್ಲೆಯಲ್ಲಿ ಸೋಮವಾರ 107 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 39, ಕುಂದಾಪುರ, ಬೈಂದೂರು ತಾಲೂಕಿನ 38, ಕಾರ್ಕಳ, ಹೆಬ್ರಿ ತಾಲೂಕಿನ 29 ಮಂದಿಗೆ ಹಾಗೂ ಹೊರ ಜಿಲ್ಲೆಯ ಓರ್ವ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.

ಒಟ್ಟು 107 ಪ್ರಕರಣಗಳಲ್ಲಿ 84 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 84 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ.

ಇಂದು 133 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 1330 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3077ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

Exit mobile version