Site icon Kundapra.com ಕುಂದಾಪ್ರ ಡಾಟ್ ಕಾಂ

ಸೆ.13: ನಾಗತಿಹಳ್ಳಿ ಚಂದ್ರಶೇಖರ್ ಗೆ ಗುಲ್ವಾಡಿ ಗೌರವ ಪುರಸ್ಕಾರ

ಕುಂದಾಪುರ: ಪ್ರತಿಷ್ಠಿತ ಗುಲ್ವಾಡಿ ಸಾಂಸ್ಕೃತಿಕ ಪ್ರತಿಷ್ಠಾನವು ಪತ್ರಕರ್ತ ಸಂತೋಷ ಕುಮಾರ ಗುಲ್ವಾಡಿ ಅವರ ಸ್ಮಾರಕ ನೀಡಲಾಗುತ್ತಿರವು ಗುಲ್ವಾಡಿ ಗೌರವ ಪುರಸ್ಕಾರಕ್ಕೆ ಖ್ಯಾತ ಚಲನಚಿತ್ರ ನಿರ್ದೇಶಕ ಡಾ. ನಾಗತಿಹಳ್ಳಿ ಚಂದ್ರಶೇಖರ್ ಆಯ್ಕೆಯಾಗಿದ್ದರೆ.

ಸೆ. 13ರಂದು ಅಪರಾಹ್ನ 2:30ಕ್ಕೆ ಗುಲ್ವಾಡಿಯ ತೋಟದ ಮನೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ ಗೌರವ ಪುರಸ್ಕಾರ ಮಾಡಲಿದ್ದಾರೆ.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳನ್ನು ಸಾಧನೆಗೈದವರಿಗೆ ಪ್ರತಿಷ್ಠಾನದ ಗೌರವ ಪ್ರಧಾನ ಮಾಡಲಾಗುವುತ್ತಿದೆ.

ಈ ಸಮಾರಂಭದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ಎ. ಮೊಹಮ್ಮದ್‌ ಹನೀಫ್‌, ಬೈಂದೂರು ಶಾಸಕ ಗೋಪಾಲ ಪೂಜಾರಿ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎ. ಮೊಹಿದಿನ್‌ ಬಾವಾ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಗುಲ್ವಾಡಿ ಸಾಂಸ್ಕೃತಿಕ ಪ್ರತಿಷ್ಠಾನದ ಪ್ರಧಾನ ಕಾರ್ಯನಿರ್ವಹಕ ಯಾಕೂಬ್‌ ಖಾದರ್‌ ಗುಲ್ವಾಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Exit mobile version