Kundapra.com ಕುಂದಾಪ್ರ ಡಾಟ್ ಕಾಂ

ಜೇಸಿ ಸಂಘಟನೆಯಿಂದ ವ್ಯಕ್ತಿತ್ವದ ನವ ನಿರ್ಮಾಣ : ನಳಿನ್‌ಕುಮಾರ್ ಶೆಟ್ಟಿ

ಕುಂದಾಪುರ: ಜೇಸಿ ಸಂಘಟನೆಯಿಂದ ವ್ಯಕ್ತಿತ್ವದ ನವ ನಿರ್ಮಾಣವಾಗುವ ಜೊತೆಗೆ ಸೇವಾ ಮನೋಭಾವವನ್ನು ವೃದ್ಧಿಸಿ ಸಮಾಜದ ಬೆಳಕಾಗಿ ಕಾರ್ಯನಿರ್ವಹಿಸುತ್ತವೆ ಎಂದು ನಾಗೂರಿನ ಕುಸುಮ ಹೋಮ್ಸ್ ಪ್ರೈ. ಲಿ., ವ್ಯವಸ್ಥಾಪಕ ನಿರ್ದೇಶಕ ನಳಿನ್ ಕುಮಾರ್ ಶೆಟ್ಟಿ ಹೇಳಿದರು.

ಅವರು ಜೇಸಿಐ ಕುಂದಾಪುರ ಸಿಟಿ ಆಶ್ರಯದಲ್ಲಿ ಕುಂದಾಪುರದ ರೋಟರಿ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ಒಂದು ವಾರಗಳ ಕಾಲ ನಡೆಯುವ ಜೇಸಿ ಸಪ್ತಾಹದ ೨ನೇ ದಿನದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಜೇಸಿಐ ಕುಂದಾಪುರ ಸಿಟಿ ಅಧ್ಯಕ್ಷ ಚಂದ್ರಕಾಂತ ವಹಿಸಿದ್ದರು.

ಕುಂದಾಪುರದ ಪ್ರೀತಮ್ ಹೇರ್ ಡ್ರೆಸ್ಸಸ್‌ನ ಮಾಲಕ ಅಣ್ಣಯ್ಯ ಭಂಡಾರಿ ಅವರನ್ನು ಸನ್ಮಾನಿಸಲಾಯಿತು. ಜೇಸಿಐ ಕುಂದಾಪುರ ಸಿಟಿ ದಶಮಾನೋತ್ಸವ ಸಮಿತಿ ಅಧ್ಯಕ್ಷ ಕೆ. ಕಾರ್ತೀಕೇಯ ಮಧ್ಯಸ್ಥ ಅವರು ಸರೋಜಿನಿ ಮಧುಸೂಧನ ಡಿ. ಕುಶೆ ಸರಕಾರಿ ಪ್ರೌಢ ಶಾಲೆ ವಡೇರಹೋಬಳಿಯ ವಿದ್ಯಾರ್ಥಿಗೆ ವಿದ್ಯಾರ್ಥಿ ವೇತನ ವಿತರಿಸಿದರು. ಮಡಿಕೆ ಓಡೆಯುವ ಸ್ಪರ್ಧೆಯ ವಿಜೇತ ಪ್ರಜ್ವಲ್ ಅವರಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮೊಳಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಕುಲಾಲ್, ಜೇಸಿಐ ಕುಂದಾಪುರ ಸಿಟಿ ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ, ನಿಕಟಪೂರ್ವಾಧ್ಯಕ್ಷ ನಿತಿನ್ ಅವಭೃತ, ಸಪ್ತಾಹ ಕಾರ್ಯದರ್ಶಿ ವೆಂಕಟೇಶ ಪ್ರಭು, ಖಜಾಂಚಿ ಯು. ರಾಘವೇಂದ್ರ ಭಟ್, ಜ್ಯೂನಿಯರ್ ಜೇಸಿ ಅಧ್ಯಕ್ಷ ಸನತ್ ಶೇಟ್, ಜೇಸಿರೆಟ್ ಅಧ್ಯಕ್ಷೆ ಸುನೀತಾ ಶ್ರೀಧರ್, ಸಪ್ತಾಹ ಸಂಚಾಲಕ ರಾಘವೇಂದ್ರ ಕೆ.ಸಿ, ಯೋಜನಾಧಿಕಾರಿ ರಾಘವೇಂದ್ರ ವಿಠಲವಾಡಿ, ದಿನೇಶ್ ಕುಂದರ್ ಉಪಸ್ಥಿತರಿದ್ದರು.

ಸಪ್ತಾಹ ಸಭಾಪತಿ ವಿಜಯ ಭಂಡಾರಿ ಕಾರ್ಯಕ್ರಮದ ಮುನ್ನೋಟ ನೀಡಿದರು. ಕಾರ್ಯದರ್ಶಿ ನಾಗೇಶ್ ನಾವಡ ವಂದಿಸಿದರು. ಪೂರ್ವಾಧ್ಯಕ್ಷ ರಾಘವೇಂದ್ರಚರಣ ನಾವಡ ಸಾಂಸ್ಕೃತಿಕ ಕಾರ್ಯಕ್ರಮ ನಿರ್ವಹಿಸಿದರು.

Exit mobile version