Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ರೋಟರಿ ಕ್ಲಬ್‌ನಿಂದ ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್, ಸ್ಯಾನಿಟೈಸರ್ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಹಾಗೂ ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಆಶಾ ಕಾರ್ಯಕರ್ತರಿಗೆ ಕ್ಷಯ ರೋಗದ ಬಗ್ಗೆ ತರಬೇತಿ ಕಾರ್ಯಕ್ರಮ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ ತರಬೇತಿಯನ್ನು ನೀಡಿದರು. ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಸ್ಯಾನಿಟೈಸರ್ ಮತ್ತು ಮಾಸ್ಕನ್ನು ವಿತರಿಸಲಾಯಿತು. ರೋಟರಿ ಕ್ಲಬ್‌ನ ಸದಸ್ಯರಾದ ಜನಾರ್ಧನ ಪೂಜಾರಿ, ಬಿ. ಲಕ್ಷ್ಮೀಕಾಂತ ಮಡಿವಾಳ, ಪ್ರೇಮಾ ಸಿ. ಪೂಜಾರಿ, ಚಂದ್ರಕಲಾ, ಗೋಪಾಲ ಪೂಜಾರಿ, ಪ್ರೀತಿ ಫೆರ್ನಾಂಡಿಸ್, ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ್ ಎಂ.ಜಿ. ಸ್ವಾಗತಿಸಿದರು. ವಲಯ ಸೇನಾನಿ ಕೆ.ರಾಮನಾಥ ನಾಯಕ್ ಪ್ರಾಸ್ತಾವಿಕ ಮಾತನಾಡಿದರು.

Exit mobile version