Site icon Kundapra.com ಕುಂದಾಪ್ರ ಡಾಟ್ ಕಾಂ

ಶುಭದಾ ಶಾಲೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜಯಂತಿ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ಕಿರಿಮಂಜೇಶ್ವರ ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜಯಂತಿಯನ್ನು ಆಚರಿಸಲಾಯಿತು.

ಆಡಳಿತ ಮಂಡಳಿಯ ಸದಸ್ಯರಾದ ಆರ್. ಕೆ. ಬಿಲ್ಲವ ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು. ಮುಖ್ಯ ಶಿಕ್ಷಕರಾದ ರವಿದಾಸ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಗುರುಗಳು ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು ಎಂಬ ಸತ್ಯವನ್ನು ಜಗತ್ತಿಗೆ ಸಾರಿದ ಇವರು ಜಗತ್ತಿನ ಶ್ರೇಷ್ಠ ಚಿಂತಕರಾಗಿದ್ದರು. ಮಾನವ ಜನಾಂಗಕ್ಕೆ ಸಾರ್ವಕಾಲಿಕ ಸತ್ಯವನ್ನು ಸಾರಿದ ವಿಶ್ವ ಮಾನವರಾಗಿದ್ದರು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version