Site icon Kundapra.com ಕುಂದಾಪ್ರ ಡಾಟ್ ಕಾಂ

ಕ್ಯಾಂಪಸ್ ಫ್ರಂಟ್ ಸದಸ್ಯತ್ವ ಅಭಿಯಾನಕ್ಕೆ ಕುಂದಾಪುರದಲ್ಲಿ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಸದಸ್ಯತ್ವ ಅಭಿಯಾನವು ರಾಜ್ಯಾದ್ಯಂತ ‘ಒಗ್ಗಟ್ಟಿನಲ್ಲಿ ಬಲವರ್ಧನೆ, ಭಿನ್ನ ಧ್ವನಿಯ ರಕ್ಷಣೆ’ ಎಂಬ ಘೋಷಾ ವಾಕ್ಯದಡಿ ಪ್ರಾರಂಭವಾಗಿದ್ದು, ಇದರ ಭಾಗವಾಗಿ ಜಿಲ್ಲಾ ಸದಸ್ಯತ್ವ ಅಭಿಯಾನಕ್ಕೆ ಕುಂದಾಪುರದಲ್ಲಿ ಚಾಲನೆ ನೀಡಲಾಯಿತು.

ಉಡುಪಿ ಜಿಲ್ಲಾ ಮುಖಂಡರಾದ ನವಾಜ್ ಶೇಕ್ ಸದಸ್ಯತ್ವ ಕೂಪನ್ ವಿದ್ಯಾರ್ಥಿಗಳಿಗೆ ನೀಡುವ ಮುಖಾಂತರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಸದಸ್ಯರಾದ ಝೀಶಾನ್ ಹಾಗೂ ಇತರ ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version