ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಆಗಸ್ಟ್ 28 ಮತ್ತು 29ರಂದು ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗಳು ಉಡುಪಿ 5, ಕುಂದಾಪುರದ 3 ಮತ್ತು ಕಾರ್ಕಳ 2 ಸೇರಿದಂತೆ ಜಿಲ್ಲೆಯ ಒಟ್ಟು 10 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಕೋವಿಡ್ ನಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ, ಜಿಲ್ಲಾ ಆಸ್ಪತ್ರೆ, ಆವರಣ, ಉಡುಪಿ ಯಲ್ಲಿ ಪ್ರತ್ಯೇಕ ಕೇಂದ್ರ ತೆರೆದಿದ್ದು, ಕೋವಿಡ್ ಬಾಧಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹಾಗೂ ಪರೀಕ್ಷಾ ಕೇಂದ್ರಕ್ಕೆ ಬರಲು ಸೂಕ್ತ ವಾಹನ ವ್ಯವಸ್ಥೆ ಮಾಡಲಾಗಿದೆ.
ವಿದ್ಯಾರ್ಥಿಗಳು ತಮ್ಮ ವಿವರಗಳನ್ನು ಪದವಿ ಪೂರ್ವಶಿಕ್ಷಣ ಇಲಾಖೆಯ ಅಧಿಕಾರಿಗಳ ದೂ.ಸಂ: 9845953978 (ಗಿರೀಶ್ ಕುಲಕರ್ಣಿ) 9448416987 (ಮಂಜುನಾಥ ಭಟ್) ಇವರ ಬಳಿ ಮುಂಚಿತವಾಗಿ ನೀಡುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.