ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಕೊಲ್ಲೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ಕುಮಾರ್ (55) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾಗಿದ್ದಾರೆ.
ಇತ್ತೀಚಿಗೆ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಾಂಗ್ರೆಸ್ ಮುಖಂಡರಾಗಿದ್ದ ಎಸ್. ಕುಮಾರ್ ಅವರು ಎರಡು ಭಾರಿ ಕೊಲ್ಲೂರು ಗ್ರಾಮ ಪಂಚಾಯತ್ ಸದಸ್ಯರಾಗಿದ್ದರು. ಕೊಲ್ಲೂರು ಜೀಪು ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ ಹಾಗೂ ಐವರು ಪುತ್ರಿಯರನ್ನು ಅಗಲಿದ್ದಾರೆ.