Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕೂರ್ಮ ರಾವ್ ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ:
ಜಿಲ್ಲಾಧಿಕಾರಿ ಜಿ.ಜಗದೀಶ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈಶಾನ್ಯ ಸಾರಿಗೆಯ ಎಂಡಿ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೂರ್ಮ ರಾವ್ ಎಂ ಅವರನ್ನು ತಕ್ಷಣದಿಂದ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗ ಮಾಡಲಾಗಿದೆ.

ಎರಡು ವರ್ಷಗಳ ಕಾಲ ಉಡುಪಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ ಜಗದೀಶ್ ಅವರನ್ನು ಬೆಂಗಳೂರಿಗೆ ವರ್ಗಾಯಿಸಲಾಗಿದೆ. ರಾಜ್ಯ ಸರ್ಕಾರದ ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಮುಖ್ಯಮತ್ರಿ ಬಸವರಾಜ ಬೊಮ್ಮಾಯಿ ಅವರ ಜಂಟಿ ಕಾರ್ಯದರ್ಶಿಯಾಗಿ ಜಗದೀಶ್ ಬೆಂಗಳೂರಲ್ಲಿ ಸೇವೆ ಆರಂಭಿಸಲಿದ್ದಾರೆ.

Exit mobile version