Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಇಲ್ಲಿನ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಗೆ ಉಡುಪಿ ಜಿಲ್ಲೆಯ ಡಿ. ಡಿ. ಪಿ. ಐ ಎನ್. ಎಚ್. ನಾಗೂರ ಭೇಟಿ ನೀಡಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಗಳಿಸಿದ ಶ್ರೇಯಾ ಮೇಸ್ತ ಮತ್ತು ಅವರ ಸಹೋದರ ಸಂಜಯ್ ಮೇಸ್ತ ಇವರಿಗೆ ಸನ್ಮಾನಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಪದ್ಮನಾಭ, ಕಾರ್ಮೆಲ್ ಸಂಸ್ಥೆಯ ಶಿಕ್ಷಣ ಕಾರ್ಯದರ್ಶಿ ಭಗಿನಿ ಶುಭ ಎ. ಸಿ, ಶಿಕ್ಷಣ ಸಂಯೋಜಕರಾದ ಸಂತೋಷ್ ಕುಮಾರ್, ಜಂಟಿ ಕಾರ್ಯದರ್ಶಿ ಭಗಿನಿ ಜ್ಯೋತಿ, ಮುಖ್ಯ ಶಿಕ್ಷಕಿ ಭಗಿನಿ ಸಿ. ಕ್ರೆಸೆನ್ಸ್, ವಿದ್ಯಾರ್ಥಿಗಳ ತಾಯಿ ಪವಿತ್ರ, ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು

Exit mobile version