Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಜಮಾಬಂದಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಗ್ರಾಮ ಪಂಚಾಯತ್‌ಗಳ ಸಂಪನ್ಮೂಲ ಕ್ರೋಢಿಕರಣಕ್ಕೆ ಹೆಚ್ಚಿನ ಗಮನ ನೀಡಬೇಕು. ಸರಕಾರದ ಹಾಗೂ ಗ್ರಾಮ ಪಂಚಾಯತ್‌ನ ಅನುದಾನಗಳನ್ನು ಸಮಪರ್ಕವಾಗಿ ಬಳಸಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ನಡೆಸಬೇಕು. ಖರ್ಚು ಮಾಡಿದ ಅನುದಾನಗಳಿಗೆ ಸರಿಯಾಗಿ ಲೆಕ್ಕಪತ್ರಗಳನ್ನು ನಿರ್ವಹಿಸಿ ಯಾವುದೇ ಲೋಪದೋಷವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಕುಂದಾಪುರ ಕೃಷಿ ಇಲಾಖೆಯ ಕೃಷಿ ಅಧಿಕಾರಿ ರಘುರಾಮ ಶೆಟ್ಟಿ ಹೇಳಿದರು.

ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಸಭಾಭವನದಲ್ಲಿ ಜರಗಿದ ಗ್ರಾಮ ಪಂಚಾಯತ್‌ನ 2020-21ನೇ ಸಾಲಿನ ವಾರ್ಷಿಕ ಲೆಕ್ಕಪತ್ರಗಳ ಜಮಾಬಂದಿ ಕಾರ್ಯಕ್ರಮದಲ್ಲಿ ಜಮಾಬಂದಿ ಅಧಿಕಾರಿಯಾಗಿ ಅವರು ಮಾತನಾಡಿದರು.

ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ರವೀಂದ್ರ ಪಟೇಲ್, ನಾಗರಾಜ ಕಲೈಕಾರ್, ಬಿ.ಗಣೇಶ ಶೆಣೈ, ನಾಗರಾಜ ಖಾರ್ವಿ ಗುಡ್ಡೆಕೇರಿ, ಬಿ.ರಾಘವೇಂದ್ರ ಪೈ, ರಾಜ್‌ಕಿರಣ್, ನಿರ್ಮಲಾ ಪೂಜಾರಿ, ದೇವು ಮತ್ತಿತರರು ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ತ್ರಾಸಿ ಗ್ರಾಮ ಪಂಚಾಯತ್‌ನ ಎಸ್‌ಡಿಎ ಶಿವಾನಂದ, ಗಂಗೊಳ್ಳಿ ಗ್ರಾಪಂ ಪಿಡಿಒ ಉಮಾಶಂಕರ, ಗ್ರಾಮ ಪಂಚಾಯತ್ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

ಗ್ರಾಪಂ ಸಿಬ್ಬಂದಿ ನಾರಾಯಣ ಶ್ಯಾನುಭಾಗ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Exit mobile version