ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಗುಡ್ಡೆಕೇರಿ ಅಂಗನವಾಡಿ ಕೇಂದ್ರಕ್ಕೆ ಸ್ಟೀಲ್ ಡಬ್ಬಿಯನ್ನು ಗಂಗೊಳ್ಳಿಯ ಸ.ವಿ.ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಎಂ.ಜಿ. ಅವರು ಅಂಗನವಾಡಿ ಕಾರ್ಯಕರ್ತೆ ನಿಖಿತಾ ಅವರಿಗೆ ಹಸ್ತಾಂತರಿಸಿದರು.
ವಲಯ ಸೇನಾನಿ ಕೆ. ರಾಮನಾಥ ನಾಯಕ್, ಸಂಸ್ಥೆಯ ಕಾರ್ಯದರ್ಶಿ ನಾರಾಯಣ ಇ.ನಾಯ್ಕ್, ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ರೋಟರಿ ಸದಸ್ಯರಾದ ಜನಾರ್ದನ ಪೂಜಾರಿ, ಬಿ.ಲಕ್ಷ್ಮೀಕಾಂತ ಮಡಿವಾಳ, ಎಂ.ನಾಗೇಂದ್ರ ಪೈ, ಫಿಲೋಮಿನಾ ಫೆರ್ನಾಂಡಿಸ್, ಸುಗುಣಾ ಹಾಗೂ ಕೃಷ್ಣ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.