Site icon Kundapra.com ಕುಂದಾಪ್ರ ಡಾಟ್ ಕಾಂ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಪ್ರವೇಶಕ್ಕೆ ಆಧಾರ್ ಕಾರ್ಡ್ ಕಡ್ಡಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು,ಸೆ.04:
ಇಲ್ಲಿನ ಶ್ರೀ ಮೂಕಾಂಬಿಕಾ ದೇವಾಲಯ ಪ್ರವೇಶಿಸುವ ಎಲ್ಲಾ ಭಕ್ತಾಧಿಗಳು ಇಂದಿನಿಂದ ಆಧಾರ್ ಕಾರ್ಡ್ ಹೊಂದಿರುವುದು ಹಾಗೂ ಕೇರಳ ರಾಜ್ಯದ ಭಕ್ತರು 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್ 19 RTPCR ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

ಕೋವಿಡ್ 19 ಹಿನ್ನಲೆಯಲ್ಲಿ ಪ್ರಸ್ತುತ ವಿದ್ಯಮಾನಗಳನ್ನು ಪರಿಗಣಿಸಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ಅವರ ಆದೇಶದಲ್ಲಿ ತಿಳಿಸಿರುವ ಸೂಚನೆ ಮೇರೆಗೆ ಕೊಲ್ಲೂರು ಮುಕಾಂಬಿಕಾ ದೇವಸ್ಥಾನದಲ್ಲಿ ಸೆ.4ರಿಂದ ಅನ್ವಯವಾಗುವಂತೆ ಮುಂದಿನ ಆದೇಶದ ವರೆಗೆ ದೇವಸ್ಥಾನದ ಪ್ರವೇಶದ್ವಾರದಲ್ಲಿ ದೇವಾಲಯ ಪ್ರವೇಶಿಸುವ ಎಲ್ಲಾ ಭಕ್ತಾಧಿಗಳ ಆಧರ್ ಕಾರ್ಡ್ ಪರಿಶೀಲಿಸಿ ಹೆಸರು, ಊರು, ಮೊಬೈಲ್ ಸಂಖ್ಯೆಯನ್ನು ದಾಖಲಿಸಲು ಹಾಗೂ ಕೇರಳ ರಾಜ್ಯದಿಂದ ಆಗಮಿಸುವ ಭಕ್ತರು 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್ 19 RTPCR ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ ಎಂದು ದೇವಳದ ಕಾರ್ಯನಿರ್ವಹಣಾಧಿಕಾರಿ ಆದೇಶಿಸಿದ್ದಾರೆ.

Exit mobile version