Kundapra.com ಕುಂದಾಪ್ರ ಡಾಟ್ ಕಾಂ

ಜನರಲ್ ಕೆ. ಎಸ್. ತಿಮ್ಮಯ್ಯ ನಗದು ಪ್ರಶಸ್ತಿಗೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ನಡೆದಂತಹ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ಮಾಜಿ ಸೈನಿಕರ ಗಂಡು ಮತ್ತು ಹೆಣ್ಣು ಮಕ್ಕಳಿಗೆ ‘ಜನರಲ್ ಕೆ ಎಸ್ ತಿಮ್ಮಯ್ಯ’ ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ.

ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇವರಿಂದ ಪಡೆಯಬಹುದಾಗಿದೆಂದು ಪ್ರಕಟಣೆ ತಿಳಿಸಿದೆ.

Exit mobile version