Kundapra.com ಕುಂದಾಪ್ರ ಡಾಟ್ ಕಾಂ

ಹೆಸ್ಕತ್ತೂರು ಶಾಲೆಯಲ್ಲಿ ಗುರುವಂದನೆ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಹೆಸ್ಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹೆಸ್ಕತ್ತೂರು ಹಾಗೂ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ, ಹೆಸ್ಕತ್ತೂರು ಒಕ್ಕೂಟ ಇವುಗಳ ವತಿಯಿಂದ ಗುರುವಂದನೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ್, ಸಹ ಶಿಕ್ಷಕರಾದ ಸಂಜೀವ ಎಂ, ಜಯಲಕ್ಷ್ಮಿ ಬಿ. , ಜಯರಾಮ ಶೆಟ್ಟಿ, ವಿಜಯಾ ಅರ್, ಅಶೋಕ ತೆಕ್ಕಟ್ಟೆ, ವಿಜಯ ಶೆಟ್ಟಿ, ರವೀಂದ್ರ ನಾಯಕ್ , ಅಂಗನವಾಡಿ ಶಿಕ್ಷಕಿ ಶರ್ಮಿಳಾ ಅವರನ್ನು ಸನ್ಮಾನಿಸಲಾಯಿತು. ಹಾಗೂ ಹುಣಸೆಮಕ್ಕಿ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ರಾಜೀವ ಕುಲಾಲ, ಕೊರ್ಗಿ ಗ್ರಾಮ ಪಂಚಾಯತ್ನ ನಿಕಟಪೂರ್ವ ಅಧ್ಯಕ್ಷರಾದ ಗಂಗೆ ಕುಲಾಲ ಅವರನ್ನು ಗೌರವಿಸಲಾಯಿತು.

ಶಾಲಾ ಎಸ್‌ಡಿಎಂಸಿಯ ಅಧ್ಯಕ್ಷರಾದ ಕೃಷ್ಣ ಕೆದ್ಲಾಯ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷರಾದ ವಿನುತಾ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಹೆಸ್ಕತ್ತೂರು ಒಕ್ಕೂಟದ ಅಧ್ಯಕ್ಷರಾದ ಅಶೋಕ ಶೆಟ್ಟಿ, ಸೇವಾ ಪ್ರತಿನಿಧಿ ಆಶಾ, ಹುಣಸೆಮಕ್ಕಿ ಸಮೂಹ ಸಂಪನ್ಮೂಲ ವ್ಯಕ್ತಿ ರಾಜೀವ ಕುಲಾಲ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ, ಹೆಸ್ಕತ್ತೂರು ಒಕ್ಕೂಟದ ಸದಸ್ಯರಿಂದ ಹಾಗೂ ಎಸ್‌ಡಿಎಂಸಿ ವತಿಯಿಂದ ಶಾಲಾ ವಠಾರದಲ್ಲಿ ಶ್ರಮದಾನ ನಡೆಯಿತು. ದೀಪಾ ಶೆಟ್ಟಿ ಹೆಸ್ಕತ್ತೂರು ಸ್ವಾಗತಿಸಿದರು. ವಿನುತಾ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಾಯತ್ರಿ ಆಚಾರ್ ಕಾರ್ಯಕ್ರಮ ನಿರೂಪಿಸಿದರು.

Exit mobile version