Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಸೇನೇಶ್ವರ ದೇವಸ್ಥಾನಕ್ಕೆ ಸಚಿವ ವಿ. ಸುನಿಲ್ ಕುಮಾರ್ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಅವರು ಸೋಮವಾರ ಬೈಂದೂರಿನ ಶ್ರೀ ಸೇನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದರು.

ಈ ಸಂದರ್ಭ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಜಿಲ್ಲಾಧ್ಯಕ್ಷ ಸುರೇಶ್ ಕುಯಿಲಾಡಿ, ಬೈಂದೂರು ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಧರ್ಮದರ್ಶಿ ಜಯಾನಂದ ಹೋಬಳಿದಾರ್, ಬೈಂದೂರು ತಹಶಿಲ್ದಾರ್ ಶೋಭಾಲಕ್ಷ್ಮೀ ಎಚ್.ಎಸ್, ದೇವಸ್ಥಾನದ ಆಡಳಿತಾಧಿಕಾರಿ ಮಂಜು ಬಿಲ್ಲವ, ಜಿಪಂ ಮಾಜಿ ಸದಸ್ಯ ಸುರೇಶ್ ಬಟವಾಡಿ ಹಾಗೂ ಇನ್ನಿತರರು ಇದ್ದರು.

Exit mobile version