Site icon Kundapra.com ಕುಂದಾಪ್ರ ಡಾಟ್ ಕಾಂ

ವಂಡ್ಸೆ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾ. ಸರ್ವೆಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಶ್ರೀ ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್‌ನ ಖಜಾಂಚಿ ಜಿ. ಶ್ರೀಧರ್ ಶೆಟ್ಟಿ ಶಾಲೆಯ ಎಲ್ಲಾ ಶಿಕ್ಷಕರನ್ನು ಗೌರವಿಸಿ, ಉತ್ತಮ ವೃತ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಅಭಿವೃದ್ದಿ ಶಾಖೆ ಆರಂಭವಾಗಿದೆ. ಟ್ರಸ್ಟ್ ವತಿಯಿಂದ ಸಾಧ್ಯವಾದಷ್ಟು ಸೌಲಭ್ಯ ನೀಡುವಲ್ಲಿ ಪ್ರಯತ್ನಿಸಲಾಗುವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಮಂಜುನಾಥ ಎ.ಜಿ ವಹಿಸಿದ್ದರು. ಶ್ರೀ ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್‌ನ ಟ್ರಸ್ಟಿ ಶ್ರೀನಿವಾಸ ಪೂಜಾರಿ ಕಲ್ಮಡಿ, ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಶಾಂತ್ ಪೂಜಾರಿ, ಶಶಿಕಲಾ, ಗೋವರ್ಧನ್ ಜೋಗಿ, ಸುಬ್ಬು, ಎಸ್.ಡಿ.ಎಂ.ಸಿ ಸದಸ್ಯರು, ಶಿಕ್ಷಕವೃಂದದವರು ಉಪಸ್ಥಿತರಿದ್ದರು.

ಶಿಕ್ಷಕಿ ನಾಗವೇಣಿ ಸ್ವಾಗತಿಸಿ, ಮುಖ್ಯಶಿಕ್ಷಕ ಚಂದ್ರ ನಾಯ್ಕ್ ಎಸ್., ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕ ರವಿಚಂದ್ರ ವಂದಿಸಿದರು.

Exit mobile version