Site icon Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಮಕ್ಕಳ ತಜ್ಞ ವೈದ್ಯ ಡಾ. ರವಿರಾಜ್ ರಾವ್ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು,ಸೆ
.07: ಬೈಂದೂರಿನ ಖ್ಯಾತ ಮಕ್ಕಳ ತಜ್ಞ ಡಾ. ರವಿರಾಜ್ (೬೫) ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮೂಲತಃ ಉಡುಪಿಯವರಾದ ಡಾ. ರವಿರಾಜ್ ಅವರು, ಬೈಂದೂರು ಸರಕಾರಿ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿ ವೈದ್ಯಕೀಯ ಸೇವೆ ಆರಂಭಿಸಿದ್ದರು. ಸ್ವಯಂ ನಿವೃತ್ತಿ ಹೊಂದಿ ಬೈಂದೂರು ಹೊಸ ಬಸ್ ನಿಲ್ದಾಣದ ಸಮೀಪದ ಬಾಲಕ್ಷೇಮ ಕ್ಲಿನಿಕ್ ನಡೆಸುತ್ತಿದ್ದರು. ಸುಧೀರ್ಘ ಅವಧಿಯಲ್ಲಿ ಮಕ್ಕಳ ತಜ್ಞರಾಗಿ ಸೇವೆ ಸಲ್ಲಿಸಿದ್ದ ಅವರು ಬೈಂದೂರು ಹಾಗೂ ಭಟ್ಕಳದಲ್ಲಿ ಪ್ರಸಿದ್ಧಿ ಪಡೆದಿದ್ದರು. ಎಲ್‌ಐಸಿಯ ಮೆಡಿಕಲ್ ಎಕ್ಸಾಮಿನರ್ ಆಗಿಯೂ ಸೇವೆ ಸಲ್ಲಿಸುತ್ತಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

ಬೈಂದೂರಿನಿಂದ ಪತ್ನಿಯೊಂದಿಗೆ ಚೆನ್ನೈಗೆ ತೆರಳಿದ್ದ ಅವರಿಗೆ ಚೆನ್ನೈ ಎರ್‌ಪೋರ್ಟ್‌ನಲ್ಲಿ ಹೃದಯಾಘಾತವಾಗಿತ್ತು ಎನ್ನಲಾಗಿದೆ. ಮೃತರು ಪತ್ನಿ ಹಾಗೂ ಕುಟುಂಬಿಕರನ್ನು ಅಗಲಿದ್ದಾರೆ.

► ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ. ಎಲ್. ಜೋಸ್ ನಿಧನ – https://kundapraa.com/?p=52147 .

Exit mobile version