Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೆಕ್ಕೆ ಒಕ್ಕೂಟದಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕೊಲ್ಲೂರು ವಲಯ ಮೆಕ್ಕೆ ಒಕ್ಕೂಟದ ಛತ್ರಮಠ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇಂದು ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.

ವನದುರ್ಗಾ ಪರಮೇಶ್ವರಿ ದೇವಸ್ಥಾನದ ಆಡಳಿತ ಧರ್ಮದರ್ಶಿಯಾದ ನಾರಾಯಣ ಶೆಟ್ಟಿ ಅತ್ತಿಕಾರ್ ಕಾರ್ಯಕ್ರಮ ಉದ್ಘಾಟಿಸಿದರು.

ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಮೆಕ್ಕೆ ಒಕ್ಕೂಟದ ಅಧ್ಯಕ್ಷರಾದ ಎಂ ಜೆ ಬೇಬಿ ವಹಿಸಿದ್ದರು. ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲೆಯ ಹಿರಿಯ ನಿರ್ದೇಶಕರಾದ ಗಣೇಶ್ ಬಿ., ಕೊಲ್ಲೂರು ವಲಯದ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ಸತ್ಯನಾರಾಯಣ ಅಡಿಗ ಗುಡಿಮನೆ, ಜಡ್ಕಲ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವನಜಾಕ್ಷಿ ಶೆಟ್ಟಿ, ಬೈಂದೂರು ತಾಲೂಕು ಯೋಜನಾಧಿಕಾರಿಗಳಾದ ಶಶಿರೇಖಾ ಪಿ., ಗ್ರಾಮ ಪಂಚಾಯತ್ ಸದಸ್ಯರಾದ ವಿದ್ಯಾವತಿ ಕೃಷ್ಣ ಕನ್ನಂತ, ಕೊಲ್ಲೂರು ವಲಯದ ಅಧ್ಯಕ್ಷರಾದ ಜಯರಾಮ್ ಪೂಜಾರಿ, ಚಿತ್ತೂರು ವಲಯದ ವಲಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ, ಗೋಳಿಹೊಳೆ ವಲಯದ ವಲಯ ಅಧ್ಯಕ್ಷರಾದ ಮಂಜುನಾಥ್ ಪೂಜಾರಿ ಸಸಿಹಿತ್ಲು, ಕೊಲ್ಲೂರು ವಲಯದ ಜನಜಾಗೃತಿ ವೇದಿಕೆ ಸದಸ್ಯರಾದ ಮಹಾಬಲ ಪೂಜಾರಿ ಉಪಸ್ಥಿತರಿದ್ದರು.

ಉಡುಪಿ ಜಿಲ್ಲೆಯ ಹಿರಿಯ ನಿರ್ದೇಶಕರಾದ ಗಣೇಶ ಬಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಫಲಾನುಭವಿಗಳಿಗೆ ಸೋಲಾರ್ ವಿತರಣೆ ಲಾಭಾಂಶ ವಿತರಣೆ ಹಾಗೂ ಆನ್‌ಲೈನ್ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳಿಗೆ ಜ್ಞಾನ ತಾಣ ಯೋಜನೆಯಡಿ ಲ್ಯಾಪ್‌ಟಾಪ್ ವಿತರಣೆ ಮಾಡಿದರು. ಕೊಲ್ಲೂರು ವಲಯದ ಮೇಲ್ವಿಚಾರಕರಾದ ರಾಮ ಎನ್ ಸ್ವಾಗತಿಸಿ ಒಕ್ಕೂಟದ ಸೇವಾಪ್ರತಿನಿಧಿ ಕೃಷ್ಣ ವಂದಿಸಿ, ಮೆಕ್ಕೆ ಒಕ್ಕೂಟದ ಸೇವಾ ಪ್ರತಿನಿಧಿ ರಾಮ ಶೆಟ್ಟಿ ಅತ್ತಿಕಾರ್ ಕಾರ್ಯಕ್ರಮ ನಿರ್ವಹಿಸಿದರು.

Exit mobile version