Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ವೆಂಕಟರಮಣ ಕಾಲೇಜಿನಲ್ಲಿ ಸಿ.ಎ/ಸಿ.ಎಸ್ ಕೋರ್ಸ್‌ಗಳ ಮಾಹಿತಿ ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಸಿ.ಎ/ ಸಿ.ಎಸ್ ಕೋರ್ಸ್‌ಗಳ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು.

ಸಂಪನ್ಮೂಲ ವೈಕ್ತಿಯಾಗಿ ಆಗಮಿಸಿದ ಸಿ.ಎ.ನಾಗೇಂದ್ರ ಭಕ್ತ ಹೆಬ್ರಿ ಹಾಗೂ ಸಿ.ಎಸ್.ಸಂತೋಷ ಪ್ರಭು ಉಡುಪಿ ಅವರು ಕೋರ್ಸ್ ಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಗಣೇಶ ಮೊಗವೀರ ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿದ್ದರು.

ಕಾಲೇಜಿನ ಬೋಧಕ, ಬೋಧಕೇತರ ವ್ರಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಾಂಶುಪಾಲರು ಸ್ವಾಗತಿಸಿ, ಕನ್ನಡ ಉಪನ್ಯಾಸಕರಾದ ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿ, ಅರ್ಥಶಾಸ್ತ್ರ ಉಪನ್ಯಾಸಕರಾದ ಹರ್ಷ ಶೆಟ್ಟಿ ವಂದಿಸಿದರು.

Exit mobile version