Kundapra.com ಕುಂದಾಪ್ರ ಡಾಟ್ ಕಾಂ

ಸೆಪ್ಟೆಂಬರ್: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಕಾರ್ಯಕ್ರಮ

ಕುಂದಾಪುರ: ಇಲ್ಲಿನ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ  ಕಟ್ಟಡ ಗೊಂಬೆಮನೆಯಲ್ಲಿ  ಸೆಪ್ಟೆಂಬರ್ ತಿಂಗಳ ಕಾರ್ಯಕ್ರಮ ಜರುಗಿತು. ಈ ತಿಂಗಳ ಗೊಂಬೆ ಮನೆ ಅತಿಥಿಯಾಗಿ ಸದಾನಂದ ಸೇರುಗಾರ್ , ಉಪ್ಪಿನಕುದ್ರು ಭಾಗವಹಿಸಿದ್ದರು.

ಗೊಂಬೆಯಾಟ ಅಕಾಡೆಮಿ ಅಧ್ಯಕ್ಷ  ಭಾಸ್ಕರ್ ಕೊಗ್ಗ ಕಾಮತ್ ಅವರು ಕಾರ್ಯಕ್ರಮದ ಪ್ರಾಯೋಜಕ ಕರುಣಾಕರ ಪೈ, ಹೆಮ್ಮಾಡಿ, ನಿವೃತ್ತ ಹಿರಿಯ ಶಿಕ್ಷಕಿ ಸೆವರಿನ್ ಮೆಂಡೋನ್ಸಾ ಇವರನ್ನು ಶಿಕ್ಷಕ ದಿನಾಚರಣೆ  ಪ್ರಯುಕ್ತ ಸನ್ಮಾಸಿದರು.

ಯು.ವಾಮನ್ಸೆಪ್ಟೆಂಬರ್: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಕಾರ್ಯಕ್ರಮ ಪೈ ಮುಖ್ಯ ಅತಿಥಿಗಳಾಗಿ ಶುಭ ಹಾರೈಸಿದರು. ಕಾರ್ಯಕ್ರಮದ ಕೊನೆಯಲ್ಲಿ  ಶ್ರೀ ದುರ್ಗಾಪರಮೇಶ್ವರಿ ಬಾಲಕಿಯರ ಯಕ್ಷಗಾನ ತಂಡ, ಹೆಮ್ಮಾಡಿ ಇವರಿಂದ ಮಧುರ ಮಹೇಂದ್ರ ಯಕ್ಷಗಾನ ಬಯಲಾಟ ಕಿಕ್ಕಿರಿದು ಸೇರಿದ ಪ್ರೇಕ್ಷಕರನ್ನು  ರಂಜಿಸಿತು. ನಾಗೇಶ್ ಶ್ಯಾನುಭಾಗ್ ಕಾರ್ಯಕ್ರಮ ನಿರೂಪಿದ್ದರು.

Exit mobile version