Kundapra.com ಕುಂದಾಪ್ರ ಡಾಟ್ ಕಾಂ

ಜೆಸಿಐ ಬೈಂದೂರು ಸಿಟಿ: ಬಂಧನ್ ಜೆಸಿಐ ಸಪ್ತಾಹ 2021

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಜೆಸಿಐ ಸಿಟಿ ವತಿಯಿಂದ ಬಂಧನ್ ಜೆಸಿಐ ಸಪ್ತಾಹ 2021 ಇದರ ಮೂರನೇ ದಿನದ ಅಂಗವಾಗಿ ಕಿಟ್ ವಿತರಣೆ ಮತ್ತು ಸ್ಕಾಲರ್ಶಿಪ್ ನೋಟ್ ಬುಕ್ ವಿತರಣೆ, ಹಾಗೂ ಸ್ಪೋರ್ಟ್ಸ್ ಕಾರ್ಯಕ್ರಮ ಇಲ್ಲಿನ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ಜೆಸಿಐ ವಲಯಾಧಿಕಾರಿ ಮಣಿಕಂಠ ದೇವಾಡಿಗ ಕಾರ್ಯಕ್ರಮ ಉದ್ಘಾಟಿಸಿದರು, ಜೇಸಿಐ ಬೈಂದೂರು ಸಿಟಿ ಘಟಕದ ಅಧ್ಯಕ್ಷರಾದ ಶ್ರೀಧರ್ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಪೂರ್ವಾಧ್ಯಕ್ಷೆ ಪ್ರಿಯದರ್ಶಿನಿ ಕಮಲೇಶ ಪ್ರಸ್ತಾವಿಕ ನುಡಿಗಳನ್ನಾಡಿದರು. ಜೇಸಿರೇಟ್ ಅಧ್ಯಕ್ಷೆ ಅನಿತಾ ಆರ್ ಕೆ ಶುಭ ಹಾರೈಸಿದರು.

ಈ ಸಂದರ್ಭ ಬೈಂದೂರು ಸಿಟಿ ಘಟಕದ ಪದಾಧಿಕಾರಿಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು. ಜೆಸಿ ಸವಿತಾ ಗಾಣಿಗ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Exit mobile version