Kundapra.com ಕುಂದಾಪ್ರ ಡಾಟ್ ಕಾಂ

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 2021-22ನೇ ಶೈಕ್ಷಣಿಕ ಸಾಲಿನ ಒಂದನೇ ತರಗತಿಯಿಂದ ಅಂತಿಮ ಪದವಿ/ಡಿಪ್ಲೋಮ ಮತ್ತು ವೃತ್ತಿಪರ ಪದವಿವರೆಗೆ ಕರ್ನಾಟಕದಲ್ಲಿರುವ ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇವರಿಂದ ಪಡೆದು, ಒಂದರಿಂದ ಅಂತಿಮ ಪದವಿ/ಡಿಪ್ಲೋಮ ವರೆಗೆ ಅಕ್ಟೋಬರ್ 15ರ ಒಳಗೆ ಹಾಗೂ ವೃತ್ತಿಪರ ಪದವಿ ವ್ಯಾಸಂಗ ಮಾಡುತ್ತಿರುವವರು ನವೆಂಬರ್ 15ರೊಳಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Exit mobile version