Kundapra.com ಕುಂದಾಪ್ರ ಡಾಟ್ ಕಾಂ

ಆಳ್ವಾಸ್‌ನಲ್ಲಿ ರಾಷ್ಟ್ರೀಯ ಇಂಜಿನಿಯರ್ಸ್ ಡೇ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ:
ಇಂಜಿನಿಯರಿಂಗ್ ವಿಸ್ತಾರವಾದ ಕ್ಷೇತ್ರವಾಗಿದ್ದು, ವಿವಿಧ ಕೌಶಲ್ಯಗಳನ್ನು ವಿದ್ಯಾರ್ಥಿ ಜೀವನದಲ್ಲಿ ತೊಡಗಿಸಿಕೊಂಡಾಗ ಹೆಚ್ಚಿನ ಅವಕಾಶಗಳು ಲಭಿಸಲಿವೆ ಎಂದು ಮಂಗಳೂರಿನ ಎನ್‌ಎಚ್‌ಎಐ ಪ್ರೊಜೆಕ್ಟ್ ಡೈರೆಕ್ಟರ್ ಶಿಶು ಮೋಹನ್ ತಿಳಿಸಿದರು.

ಮಿಜಾರಿನ ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ವಿಭಾಗದ ಆಶ್ರಯದಲ್ಲಿ ನಡೆದ ‘ರಾಷ್ಟ್ರೀಯ ಇಂಜಿನಿಯರ್ಸ್ ಡೇ’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ರಾಷ್ಟ್ರ ನಿರ್ಮಾಣದಲ್ಲಿ ಇಂಜಿನಿಯರಿಂಗ್‌ಗಳ ಕೊಡುಗೆ ಮಹತ್ವದಾಗಿದೆ. ವಿದ್ಯಾರ್ಥಿಗಳು ವಿವಿಧ ತರಬೇತಿಗಳಲ್ಲಿ ಪಾಲ್ಗೊಳ್ಳುವ ಮೂಲಕ ಪ್ರಾಯೋಗಿಕ ಜ್ಞಾನವನ್ನು ಪಡೆದು ತಮ್ಮ ವೃತ್ತಿಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಇಂಜಿನಿಯರ್ಸ್ ಡೇ ಪ್ರಯುಕ್ತ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಡಾ. ಪೀಟರ್ ಫೆನಾಂಡಿಸ್, ಆಳ್ವಾಸ್ ಕಾಲೇಜಿನ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಲತಿಕಾ ಸ್ವಾಗತಿಸಿದರು, ಅಭಿಷೇಕ್ ವಂದಿಸಿದರು, ರಮ್ಯಶ್ರೀ ಶೆಟ್ಟಿ ನಿರೂಪಿಸಿದರು.

Exit mobile version