Kundapra.com ಕುಂದಾಪ್ರ ಡಾಟ್ ಕಾಂ

ವರಸಿದ್ಧಿ ವಿನಾಯಕ ಪಿಯು ಕಾಲೇಜು: ವೃತ್ತಿಪರ ಕೋರ್ಸ್‌ಗಳ ಮಾಹಿತಿ ಕಾರ್ಯಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕೆರಾಡಿ ವರಸಿದ್ಧಿ ವಿನಾಯಕ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳಾದ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಶಿಕ್ಷಣದ ಪ್ರವೇಶ ಪರೀಕ್ಷೆಗಳಆದ ನೀಟ್, ಸಿಇಟಿ ಮತ್ತು ಜೆಇಇ ಪರೀಕ್ಷೆ ಎದುರಿಸಲು ಒಂದು ದಿನದ ಮಾಹಿತಿ ಕಾರ್ಯಾಗಾರ ನಡೆಯಿತು.

ಸಂಪನ್ಮೂಲ ವ್ಯಕ್ತಿ ಎಮ್. ಎಸ್. ರಾಮಚಂದ್ರ ಐಐಟಿ ರೂರ್ಕೆ ಅವರು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿಯನ್ನು ನೀಡಿದರು.

ಕಾಲೇಜಿನ ಸಂಚಾಲಕರಾದ ಕೆರಾಡಿ ಚಂದ್ರಶೇಖರ ಶೆಟ್ಟಿ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದು, ಪ್ರಾ0ಶುಪಾಲರಾದ ಪ್ರಸಾದ್ ಕುಮಾರ್ ಆರ್ ಪ್ರಾಸ್ತವಿಕ ಮಾತುಗಳನ್ನಾಡಿದರು. ಉಪನ್ಯಾಸಕಿ ಶ್ವೇತಾ ಕಾರ್ಯಕ್ರಮ ನಿರೂಪಿಸಿ, ಚೈತ್ರ ವಂದಿಸಿದರು.

Exit mobile version