Kundapra.com ಕುಂದಾಪ್ರ ಡಾಟ್ ಕಾಂ

ಎಪಿಡಿ ಸಂಸ್ಥೆಯಿಂದ ವಿಶೇಷ ಚೇತನರಿಗೆ ಔದ್ಯೋಗಿಕ ತರಬೇತಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಜಿಲ್ಲಾ ವಿಕಲಚೇತನರ ಇಲಾಖೆ ಉಡುಪಿ ಜಿಲ್ಲೆ, ಎಪಿಡಿ ಸಂಸ್ಥೆ ಬೆಳಗಾವಿ, ಗ್ರಾಮ ಪಂಚಾಯತ್ ಹಾಲಾಡಿ ಹಾಗೂ ಗ್ರಾಮ ಪಂಚಾಯತ್ ಹಾರ್ದಳ್ಳಿ ಮಂಡಳ್ಳಿ ಆಶ್ರಯದಲ್ಲಿ ಸಮುದಾಯಾಧಾರಿತ ಔದ್ಯೋಗಿಕ ತರಬೇತಿ ಕಾರ್ಯಕ್ರಮ ಹಾಲಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ತಾಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಮಂಜುನಾಥ ಹೆಬ್ಬಾರ್ ಮಾತನಾಡಿ ವಿಶೇಷ ಚೇತನರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿ ಸಂಸ್ಥೆಯ ಜಿಲ್ಲಾ ನೋಡಲ್ ಅಧಿಕಾರಿಗಳಾದ ಹರೀಶ ಶೆಟ್ಟಿ ಮಾತನಾಡಿ, ನಮ್ಮ ಸಂಸ್ಥೆ 1959 ರಲ್ಲಿ ಸ್ಥಾಪನೆಯಾಗಿ ವಿಶೇಷ ಚೇತನರಿಗೆ ಸ್ವಾವಲಂಬಿ ಬದುಕು ಕಲ್ಪಿಸುವ ಕೆಲಸ ಮಾಡುತ್ತಿದೆ ಮತ್ತು ಅವರಿಗೆ ಇಷ್ಟವಾಗುವ ತರಬೇತಿ ನೀಡಿ, ಗ್ರಾಮೀಣ ಮಟ್ಟದಲ್ಲಿ ವಿಶೇಷ ಚೇತನರು ಪೂರಕ ಜೀವನ ಸಾಗಿಸಲು ನಮ್ಮ ಸಂಸ್ಥೆ ಸಹಕಾರಿಯಾಗುತ್ತಿದೆ ಎಂದರು.

ಡಿಎನ್ಎ ಸಂಸ್ಥೆಯ ವ್ಯವಸ್ಥಾಪಕಿ ರೂಪ ಲಕ್ಷ್ಮೀ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶೇಷ ಚೇತನರು ಸಾಕಷ್ಟು ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದಾರೆ. ನೀವು ಕೂಡ ತರಬೇತಿಯ ಪ್ರಯೋಜನ ಪಡೆದು ಸ್ವಾವಲಂಬಿಯಾಗಿ ಜೀವನ ಸಾಗಿಸಬೇಕೆಂದು ಎಂದು ಹೇಳಿದರು.

ಈ ಸಂದರ್ಭ ಹಾಲಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ವಸಂತ್ ಕುಮಾರ್, ಶಿಬಿರಾರ್ಥಿಗಳು ಹಾಗೂ ವಿಶೇಷ ಚೇತನ ಬಂಧುಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಎಪಿಡಿ ಸಂಸ್ಥೆಯ ಪ್ರತಿನಿಧಿ ಆಕಾಶ್ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು. ಹಾಲಾಡಿ ಗ್ರಾಮ ಪಂಚಾಯತ್ ವಿ.ಆರ್.ಡಬ್ಲೂ ದೇವರಾಜ ವಂದಿಸಿದರು.

Exit mobile version