Site icon Kundapra.com ಕುಂದಾಪ್ರ ಡಾಟ್ ಕಾಂ

ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೀನುಗಾರರ ಮೃತದೇಹ ಪತ್ತೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿದ್ದ ಸಂದರ್ಭ ಅಲೆಗಳ ಹೊಡೆತಕ್ಕೆ ಸಿಲುಕಿ ಮಗುಚಿಬಿದ್ದಿದ್ದ ದೋಣಿಯಲ್ಲಿ ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಮೃತದೇಹ ಶನಿವಾರ ಪತ್ತೆಯಾಗಿದೆ.

ಚರಣ್ ಖಾರ್ವಿ (27) ಅವರ ಮೃತದೇಹ ಬೆಳಿಗ್ಗೆ ಅಮ್ಮನವರ ತೊಪ್ಲು ಓಲಗ ಮಂಟಪ ಸಮೀಪದ ಸಮುದ್ರ ತೀರದಲ್ಲಿ ದೊರೆತಿದ್ದರೇ, ಅಣ್ಣಪ್ಪ ಖಾರ್ವಿ ಅವರ ಮೃತದೇಹ ಮಧ್ಯಾಹ್ನ ಕರ್ಕಿಕಳಿ ಬಳಿ ದೊರೆತಿದೆ.

ಘಟನಾ ಸ್ಥಳಕ್ಕೆ ಬೈಂದೂರು ಕರಾವಳಿ ಕಾವಲು ಪಡೆಯ ಡಿವೈಎಸ್ಪಿ ಟಿ.ಎಸ್. ಸುಲ್ಪಿ, ಪೊಲೀಸ್ ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ, ಠಾಣಾಧಿಕಾರಿ ಪವನ್ ನಾಯ್ಕ್, ಗಂಗೊಳ್ಳಿ ಕರಾವಳಿ ಕಾವಲು ಪಡೆಯ ಎಸ್ಪೈ ವಿಜಯ ಅಮೀನ್, ಸ್ಥಳೀಯ ಮೀನುಗಾರರು ಶೋಧ ಕಾರ್ಯದಲ್ಲಿ ಭಾಗಿಯಾಗಿದ್ದರು.

ಬೈಂದೂರು ಶಾಸಕರ ಭೇಟಿ:
ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಅವರು ಘಟನಾ ಸ್ಥಳಕ್ಕೆ ಭೇಟಿ ನಿಡಿ ಮೃತರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಬೈಂದೂರು ಕ್ಷೇತ್ರದ ಮೀನುಗಾರರಿಗೆ ಮೂರು ಸಾವಿರ ಜೀವರಕ್ಷಕ ಜಾಕೆಟ್ ಒದಗಿಸುವಂತೆ ಮೀನುಗಾರಿಕಾ ಇಲಾಖೆಎ ಕೋರಲಾಗಿದೆ ಎಂದರಲ್ಲದೇ, ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ ದೊರಕಿಸಿಕೊಡಲಾಗುವುದು ಎಂದು ಭರವಸೆ ನಿಡಿದರು.

► ತಾರಾಪತಿಯಲ್ಲಿ ದೋಣಿ ಮಗುಚಿ ಇಬ್ಬರು ಮೀನುಗಾರರು ನಾಪತ್ತೆ – https://kundapraa.com/?p=52541 .

Exit mobile version