Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ಮಹಾಸಭೆ : ಶೇ.10 ಡಿವಿಡೆಂಡ್ ಘೋಷಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಆರ್ಥಿಕ ಹಿಂಜರಿತ ಹಾಗೂ ಕೋವಿಡ್-19 ಪರಿಣಾಮದ ಹೊರತಾಗಿಯೂ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ 2020-21ನೇ ಸಾಲಿನಲ್ಲಿ 24.57 ಲಕ್ಷ ರೂ. ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ. 10 ಪಾಲು ಮುನಾಫೆ ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ. ವರ್ಷಾಂತ್ಯಕ್ಕೆ ಬ್ಯಾಂಕಿನ ಪಾಲು ಬಂಡವಾಳ ಸುಮಾರು 1.90 ಕೋಟಿ ರೂ ಮತ್ತು 28.80 ಕೋಟಿ ರೂ. ಠೇವಣಿ ಹೊಂದಿದೆ. ವಿವಿಧ ಸಹಕಾರಿ ಬ್ಯಾಂಕ್‌ಗಳಲ್ಲಿ 17.41 ಕೋಟಿ ಹೂಡಿಕೆ ಮಾಡಲಾಗಿದೆ ಎಂದು ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಆನಂದ ಬಿಲ್ಲವ ಹೇಳಿದರು.

ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಬುಧವಾರ ಜರಗಿದ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಠೇವಣಿ ಸಂಗ್ರಹದಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವುದು, ಸುಸ್ತಿ ಸಾಲಗಳ ಪ್ರಮಾಣ ಕಡಿಮೆ ಮಾಡುವುದು ಸೇರಿದಂತೆ ಬ್ಯಾಂಕಿನ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಚಿದು ಹೇಳಿದರು.

ಇದೇ ಸಂದರ್ಭ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ೬೦೦/೬೦೦ ಅಂಕ ಗಳಿಸಿದ ಪ್ರಸನ್ನಾ ಪೈ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ೬೨೬/೬೨೫ ಅಂಕ ಪಡೆದ ಶ್ರೇಯಾ ಮೇಸ್ತ ಅವರನ್ನು ಗೌರವಿಸಲಾಯಿತು.

ಬ್ಯಾಂಕಿನ ನಿರ್ದೇಶಕರಾದ ಕೆ.ಮಾಧವ ಖಾರ್ವಿ, ಹರೀಶ ಮೇಸ್ತ, ಸುಭಾಶ್ಚಂದ್ರ ಪ್ರಜಾರಿ, ಜಿ.ಗೋಪಾಲ ನಾಚಿii, ಶ್ರೀನಿವಾಸ ಜತ್ತನ್, ಚಂದ್ರಶೇಖರ ಪ್ರಜಾರಿ, ನಾಗರಾಜ ಪ್ರಜಾರಿ, ಯಮುನಾ, ಆಶಾಲತಾ, ನಾಗರಾಜ ಎಂ. ಮತ್ತು ಲಕ್ಷ್ಮಣ ಉಪಸ್ಥಿತರಿದ್ದರು. ಪ್ರಧಾನ ವ್ಯವಸ್ಥಾಪಕ ದಯಾನಂದ ಗಾಣಿಗ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Exit mobile version